Thursday, November 20, 2025
21.7 C
Bengaluru
Google search engine
LIVE
ಮನೆ#Exclusive Newsಬಾಣಂತಿಯರ ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಬಾಣಂತಿಯರ ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಬಳ್ಳಾರಿಯಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬಿಮ್ಸ್ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಚಾಮರಾಜನಗರದ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾತ್ನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಿತಿಯ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರು ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆಸಲಾಗಿದೆ. ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ:
ಆರೋಗ್ಯ ಇಲಾಖೆಯ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಪ್ರಕರಣದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದ್ದೇವೆ. ಸಮಿತಿಯ ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments