ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್, ಅನಾರೋಗ್ಯ ಕಾರಣದ ನೇಪ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಡೆ ಆಯಾಗಿದ್ದಾರೆ. ಜೈಲಿನಿಂದ ತಾತ್ಕಾಲಿಕವಾಗಿ ಬಿಡುಗಡೆ ಪಡೆದಿರುವ ಖುಷಿ ಈಗ ಹಾರಿಹೋಗುವಂಥಹಾ ಸುದ್ದಿ ಇದೀಗ ಬಂದಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ವಿರುದ್ಧ ಮತ್ತೊಂದು ಪ್ರಬಲ ಸಾಕ್ಷಿಗಳು ಬೆಳಕಿಗೆ ಬಂದಿದೆ. ರೇಣುಕಾ ಸ್ವಾಮಿ ಶವದ ಮುಂದೆ ದರ್ಶನ್ ನಿಂತಿರುವ ಚಿತ್ರ ಇದೀಗ ಪೊಲೀಸರಿಗೆ ಲಭ್ಯವಾಗಿದ್ದು, ಆ ಫೋಟೋವನ್ಅನು ಈಗ ನ್ಯಾಯಾಲಯದ ಗಮನಕ್ಕೂ ತರಲು ಸಿದ್ದವಾಗಿದೆ.
ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾ ಸ್ವಾಮಿ ನಿಧನ ಹೊಂದಿದಾಗ ದರ್ಶನ್ ಆ ಸ್ಥಳದಲ್ಲಿ ಇರಲಿಲ್ಲ ಎಂಬ ವಾದ ಈ ಹಿಂದೆ ಕೇಳಿ ಬಂದಿತ್ತು. ದರ್ಶನ್, ರೇಣುಕಾ ಸ್ವಾಮಿಗೆ ಕೋಪದಲ್ಲಿ ಹೊಡೆದು ಅಲ್ಲಿಂದ ಹೊರಟು ಹೋದರು ಎನ್ನಲಾಗಿತ್ತು. ಆದರೆ ಈಗ ಪೊಲೀಸರಿಗೆ ಲಭ್ಯವಾಗಿರುವ ಫೋಟೊಗಳು ಹೇಳುತ್ತಿರುವುದೇ ಬೇರೆ. ರೇಣುಕಾ ಸ್ವಾಮಿ ಶವದ ಮುಂದೆ ದರ್ಶನ್ ಹಾಗೂ ಇತರೆ ಆರೋಪಿಗಳು ನಿಂತಿರುವ ಫೋಟೊಗಳು ಇದಾಗಿದ್ದು, ಪ್ರಕರಣದ ಆರೋಪಿಯೊಬ್ಬರ ಮೊಬೈಲ್ನಿಂದ ಈ ಫೋಟೊಗಳನ್ನು ರಿಟ್ರೀವ್ ಮಾಡಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ದೊರೆತ ಸಾಕ್ಷ್ಯಗಳನ್ನು ಪರೀಕ್ಷೆಗಾಗಿ ಹೈದರಾಬಾದ್ ಹಾಗೂ ಬೆಂಗಳೂರಿನ ಎಫ್ಎಸ್ಎಲ್ ಕೇಂದ್ರಗಳಿಗೆ ಕಳಿಸಿದ್ದರು. ಹೈದರಾಬಾದ್ನಿಂದ ಕೆಲವು ವರದಿಗಳು ಬರುವುದು ಬಾಕಿ ಇದ್ದವು. ಅವು ಈಗ ಬಂದಿದ್ದು, ಆರೋಪಿ ಪವನ್ ಅವರ ಮೊಬೈಲ್ನಿಂದ ಕ್ಲಿಕ್ಕಿಸಲಾದ 2 ಫೋಟೋಗಳನ್ನು ರಿಕವರಿ ಮಾಡಲಾಗಿದೆ. ರೇಣುಕಾ ಸ್ವಾಮಿ ಶವನದ ಮುಂದೆ ದರ್ಶನ್ ಹಾಗೂ ಇತರೆ ಆರೋಪಿಗಳು ನಿಂತಿರುವ ಚಿತ್ರವನ್ನು ಪವನ್ ಕ್ಲಿಕ್ಕಿಸಿದ್ದರಂತೆ. ಆ ನಂತರ ಅವನ್ನು ಡಿಲೀಟ್ ಮಾಡಿದ್ದರು. ಆದರೆ ಎಫ್ಎಸ್ಎಲ್ ಕೇಂದ್ರದವರು ತಂತ್ರಜ್ಞಾನ ಬಳಸಿ ಆ ಫೋಟೊಗಳನ್ನು ರಿಟ್ರೀವ್ ಮಾಡಿದ್ದಾರೆ.
ಈಗ ಲಭ್ಯವಾಗಿರುವ ಚಿತ್ರದಲ್ಲಿ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್, ನೀಲಿ ಬಣ್ಣದ ಟೀ ಶರ್ಟ್ ಧರಿಸಿ ದರ್ಶನ್ ನಿಂತಿರುವ ಚಿತ್ರವಿದೆ. ಚಿತ್ರದಲ್ಲಿ ಪ್ರಕರಣ ಇತರೆ ಕೆಲವು ಆರೋಪಿಗಳು ಸಹ ಇದ್ದಾರೆ. ಚಿತ್ರದಲ್ಲಿ ರೇಣುಕಾ ಸ್ವಾಮಿಯ ಶವವೂ ಇದೆ. ಈ ಚಿತ್ರವನ್ನು ಪವನ್ ತೆಗೆದಿದ್ದಾರೆ. ಪವನ್ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದ ಪೊಲೀಸರು ಅದನ್ನು ಎಫ್ಎಸ್ಎಲ್ಗೆ ರವಾನಿಸಿದ್ದಾರೆ.