ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿ ಪರ ಬಹಿರಂಗ ಪ್ರಚಾರ ಮಾಡಿದ್ದಾರೆ..ಇದರಿಂದ ಬಿಜೆಪಿ ಮುಜುಕ್ಕರಕ್ಕೊಳಗಾಗಿದೆ.ಯಶವಂತಪುರ ಕ್ಷೇತ್ರದ ಶಿಕ್ಷಕರ ಜೊತೆ ಸೋಮಶೇಖರ್ ಸಭೆ ನಡೆಸಿದ್ದರು. ಈ ವೇಳೆ ಪುಟ್ಟಣ್ಣಗೆ ಮತ ನೀಡುವಂತೆ ಪ್ರಚಾರ ಮಾಡಿದ್ದಾರೆ. ವಿಧಾನಸಭಾ ಅಧಿವೇಶನ ಆರಂಭವಾಗಿದ್ದು ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿ ಪುಟ್ಟಣ್ಣ ಪರ ಪತಯಾಚನೆ ಮಾಡಿದ್ದಕ್ಕೆ ಬಿಜೆಪಿ ನಾಯಕರು ಗರಂ ಆಗಿದ್ದಾರೆ.
ಸೋಮಶೇಖರ್ ಅವರು ಬಿಜೆಪಿಗೆ ಮುಜುಗರ ಮಾಡುತ್ತಿರುವುದು ಇದು ಹೊಸದೆನಲ್ಲ. ಈ ಹಿಂದೆ ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ಕ್ಷೇತ್ರದ ಬೆಂಬಲಿಗರು, ಆಪ್ತರು ಹಾಗೂ ಕಾರ್ಯಕರ್ತರ ಸಭೆಯನ್ನು ಸೋಮಶೇಖರ್ ಕರೆದಿದ್ದರು.
ಈ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಗುಣಗಾನವನ್ನು ಮಾಡಿದ್ದ ಎಸ್.ಟಿ.ಸೋಮಶೇಖರ್ ಪುಟ್ಟಣ್ಣ ಪರ ಪ್ರಚಾರ ಮಾಡುವ ಮೂಲಕ ಕಾಂಗ್ರೆಸ್ ಸೇರುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಮುಂದೆ ಇರಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ.