ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದ್ದು. ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ.
ಸುಮಾರು 10 ದಿನದ ಬಳಿಕ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ನಾಪತ್ತೆಯನ್ನು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ. ಡ್ರೋಣ್ ಕ್ಯಾಮೆರಾಗಳನ್ನು ನಡೆಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ದಿಗಂತ್, ಫೆ.25ರ ಸಂಜೆಯಿಂದ ನಾಪತ್ತೆಯಾಗಿದ್ದ. ಫರಂಗಿಪೇಟೆ ಆಂಜನೇಯ ವ್ಯಾಯಾಮ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್, ದೇವಸ್ಥಾನಕ್ಕೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ್ದ. ಬಳಿಕ ಫರಂಗಿಪೇಟೆಯಲ್ಲಿ ರೈಲ್ವೆ ಹಳಿಯಲ್ಲಿ ದಿಗಂತ್ ಚಪ್ಪಲಿ ಹಾಗೂ ಮೊಬೈಲ್ ಪತ್ತೆಯಾಗಿತ್ತು. ಒಂದು ಚಪ್ಪಲಿಯಲ್ಲಿ ರಕ್ತದ ಕಲೆ ಕಂಡುಬಂದಿತ್ತು.