Basavaraj Horatti, Council Chairman addressing a press conference regarding upcoming Council Session at Vidhana Soudha, in Bengaluru on Saturday 12th February 2022 Pics: www.pics4news.com

ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ​ ಅವರ ವಿರುದ್ಧ ಬಿಜೆಪಿ ಎಂಎಲ್​ಸಿ ಸಿ.ಟಿ.ರವಿ  ಅವರು ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್​ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನಪರಿಷತ್​​ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.  ಆಡಿಯೋ ರೆಕಾರ್ಡ್​ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್​ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್​ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು ತಿಳಿಸಿದರು.

ನಾನು ಲಕ್ಷ್ಮೀ ಹೆಬ್ಬಾಳ್ಕರ್​ ಹಾಗೂ ಸಿಟಿ ರವಿ ಅವರನ್ನು ಕರೆದು ಮಾತನಾಡಿದೆ‌. ಇದನ್ನು ಇಲ್ಲಿಗೆ ಮುಗಿಸೋಣ ಅಂತ ಸಲಹೆ ನೀಡಿದೆ. ನಾನು ಹತಾಶರಾಗಿದ್ದಾರೆ ಎಂದಿದ್ದೇನೆ. ಅದನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ ಅಂತ ಸಿಟಿ ರವಿ ಅವರು ಹೇಳಿದರು, ಎಂದು ಸಭಾಪತಿಗಳು ಮಾಹಿತಿ ನೀಡಿದರು.

ಈ ರೀತಿ ಆಗಿರುವುದು ಮೊದಲ ಸಲ. 45 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಂತಹ ಘಟನೆ ಆಗಿರಲಿಲ್ಲ. ಒಂದೊಂದು ಸಲ ಯಾಕಾದರೂ ಅಲ್ಲಿ ಕೂತಿದ್ದೇನೆ ಅನಸತ್ತೆ ಎಂದು ಅಸಮಾಧಾನ ಹೊರಹಾಕಿದರು.

ನಾನು ಯಾರ ಪರವೂ ಇಲ್ಲ, ಎರಡು ಕಡೆ ಯೋಚನೆ ಮಾಡಿದ್ದೇನೆ. ಇದು ಕಡ್ಡಿ ಹೋಗಿ ಗುಡ್ಡ ಆಯ್ತು. ಬೇಲಿಯೇ ಎದ್ದು ಹೊಲ ಮೇಯ್ದರೇ ಏನಾಗತ್ತೆ. ಜನ‌ ನಮ್ಮನ್ನು ನೋಡುತ್ತಾರೆ. ಶಾಸಕರು ನಡುವಳಿಕೆ ತಿದ್ದುಕೊಳ್ಳಬೇಕು ಎಂದು ಸೂಚನೆ ನೀಡಿದರು.

Leave a Reply

Your email address will not be published. Required fields are marked *

Verified by MonsterInsights