ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು. ಅದರಂತೆ ಡಿ ಕೆ ಬ್ರದರ್ಸ್ ಭದ್ರಕೋಟೆಯನ್ನ ವಶಪಡಿಸಿಕೊಳ್ಳುವ ಮೂಲಕ ಸೋಲಿನ ರುಚಿ ತೋರಿಸಿಲು ಕಮಲ -ದಳ ನಾಯಕರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಕಣಕ್ಕಿಳಿಸಿದ್ದು,ಡಾ. ಮಂಜುನಾಥ್ ಗೆಲುವಿಗೆ ಡಾ. ಸುಧಾಮೂರ್ತಿ ಹರಕೆ ಹೊತ್ತಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹೈ ವೋಲ್ಟೇಜ್ ಕ್ಷೇತ್ರ ಎಂದರೇ ಅದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಹೋದರ ಕಾಂಗ್ರೆಸ್ನ ಹಾಲಿ ಸಂಸದ ಡಿಕೆ ಸುರೇಶ್ ವಿರುದ್ಧ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ ಹಾಗೂ ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಅವರು ಸ್ಪರ್ಧೆ ಮಾಡಿದ್ದಾರೆ.
ಈ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಎಂಬ ಬಗ್ಗೆ ಕಾರ್ಯಕರ್ತರದಲ್ಲೂ ಬೆಟ್ಟಿಂಗ್ ಜೋರಾಗಿದ್ದು, ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರಲ್ಲಿ ಇದೀಗ ಸೋಲು ಗೆಲುವಿನ ಲೆಕ್ಕಾಚಾರಗಳು ಜೋರಾಗಿವೆ. ಇತ್ತ ಡಾ ಮಂಜುನಾಥ್ ಗೆಲುವಿಗೆ ಇನ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಅವರು ಹರಿಕೆ ಹೊತ್ತುಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಡಾ. ಮಂಜುನಾಥ್ ಅವರೇ ಬಹಿರಂಪಡಿಸಿದ್ದಾರೆ. ಡಾ. ಸಿಎನ್ ಮಂಜುನಾಥ್ ಅವರು ಗೆದ್ದರೆ ಮಂತ್ರಾಲಯದಿಂದ ಸುಮಾರು ಆರು ಕಿಲೋ ಮೀಟರ್ ಇರುವ ಒಂದು ಸ್ಥಳದಿಂದ ಕಾಲ್ನಡಿಗೆ ಮೂಲಕ ಹೋಗಿ ರಾಯರ ಪಾದ ಪೂಜೆ ಮಾಡುತ್ತೇನೆ ಎಂದು ರಾಜ್ಯಸಭಾ ಸದಸ್ಯೆ, ಇನ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಅವರು ಹರಕೆ ಹೊತ್ತಿದ್ದಾರೆ.
ಚುನಾವಣೆ ಮುಗಿದ ಬಳಿಕ ಡಾ ಮಂಜುನಾಥ್ ಅವರು ಇನ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ನೀವು ಗೆದ್ದರೆ ಮಂತ್ರಾಲಯದಿಂದ ಸುಮಾರು ಆರು ಕಿಲೋ ಮೀಟರ್ ಇರುವ ಒಂದು ಸ್ಥಳದಿಂದ ಕಾಲ್ನಡಿಗೆ ಮೂಲಕ ಹೋಗಿ ರಾಯರ ಪಾದ ಪೂಜೆ ಮಾಡುತ್ತೇನೆ ಎಂದು ಸುಧಾಮೂರ್ತಿ ಅವರು ಹರಕೆ ಹೊತ್ತಿದ್ದಾರೆ ಎಂದು ಮಂಜುನಾಥ್ ಅವರು ಕಾರ್ಯಕ್ರಮವೊಂದರಲ್ಲಿ ಹಂಚಿಕೊಂಡಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com


