ಬೆಳಗಾವಿ; ಇತ್ತೀಚೆಗಷ್ಟೆ ರೈತರಿಗೆ ಪರಿಹಾರ ನೀಡಿದ ಬಳಿಕ ರೈತರ ಆತ್ಮಹತ್ಯೆ ಸಂಖ್ಯೆಗಳು ಹೆಚ್ಚಾಗುತ್ತಿವೆ ಎಂದು ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ರೈತರು ಬರಗಾಲದಿಂದ ಒದ್ದಾಡುತ್ತಿದ್ದರೇ, ಇತ್ತ ಸಕ್ಕರೆ & ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ‘’ಬರ’’ ಕುರಿತು ವಿವಾದ ಹೇಳಿಕೆ ನೀಡಿದ್ದಾರೆ. ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ ಕರೆಂಟ್ ಪುಕ್ಕಟೆ ಸಿಗುತ್ತಿದೆ.

ಬಹಳಷ್ಟ ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬೀಜನೂ ಕೊಟ್ಟರು, ಗೊಬ್ಬರನೂ ಕೊಟ್ಟರು. ಇನ್ನೂ ರೈತರಿಗೆ ಏನಪ್ಪಾ ಅಂದ್ರೆ ಒಂದು ಆಸೆ ಇರುತ್ತೆ, ಮಗನ್ ಮ್ಯಾಲ ಮ್ಯಾಲ ಬರಗಾಲ ಬೀಳಲಿ ಅಂತ ಹೇಳಿ. ಯಾಕಂದ್ರೆ ಸಾಲ ಮನ್ನಾ ಗುತ್ತೆ ಅಂತಾ. ಈ ರೀತಿಯಾಗಿ ಬಯಸಬಾರದು ಎಂದು ಹೇಳಿದ್ದಾರೆ. ಸಚಿವರ ವಿರುದ್ದ ಬಿಜೆಪಿ ಮುಖಂಡರು ಅನ್ನದಾತರು ಆಕ್ರೋಶ  ಹೊರ ಹಾಕಿದ್ದಾರೆ.

By admin

Leave a Reply

Your email address will not be published. Required fields are marked *

Verified by MonsterInsights