ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಹಲವೆಡೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.. ಬಜ್ಪೆಯಲ್ಲಿ 10 ಮತ್ತು ಸುರತ್ಕಲ್‌ನಲ್ಲಿ 4 ಕಡೆ ದಾಳಿ ನಡೆಸಿದ್ದಾರೆ. ಕೊಲೆ ಆರೋಪಿಗಳು ಹಾಗೂ ಎಸ್‌ಡಿಪಿಐ ಮುಖಂಡರ ಮನೆಗೆ ಅಧಿಕಾರಿಗಳು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು.
ಜೂನ್ 1ರಂದು ಮಂಗಳೂರು ಹೊರವಲಯದ ಬಜ್ಪೆಯ ಕಿನ್ನಿಪದವು ಎಂಬಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸುಹಾಸ್ ಶೆಟ್ಟಿ ಹತ್ಯೆ ಕೇಸ್‌ನಲ್ಲಿ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ. ಬಳಿಕ ಈ ಪ್ರಕರಣವನ್ನು ತನಿಖೆ ನಡೆಸಲು ಎನ್‌ಐಎಗೆ ನೀಡಿತ್ತು.
ಸುಹಾಸ್ ಶೆಟ್ಟಿಯ ತಂದೆ, ತಾಯಿ ಕೂಡ ಎನ್‌ಐಎ ತನಿಖೆ ಮೂಲಕ ಮಾತ್ರ ತಮ್ಮ ಮಗನ ಸಾವಿಗೆ ನ್ಯಾಯ ಸಿಗುತ್ತೇ ಎಂದು ಒತ್ತಾಯಿಸಿದ್ದರು. ಈ ಮಧ್ಯೆ ಅವರು ರಾಜ್ಯಪಾಲರ ಮೂಲಕ ಪ್ರಕರಣವನ್ನು ಎನ್‌ಐಎಗೆ ನೀಡುವಂತೆ ಮನವಿ ಮಾಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೂ ಈ ಹತ್ಯೆಯ ಹಿಂದಿರುವ ಶಕ್ತಿಗಳ ಬಗ್ಗೆ ಗಮನಕ್ಕೆ ತಂದಿದ್ದರು. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆಯೇ ಸುಹಾಸ್ ಹತ್ಯೆ ಪ್ರಕರಣವನ್ನು ಎನ್‌ಐಎಗೆ ವಹಿಸಿತ್ತು.