ಸೂಪರ್ ಸ್ಟಾರ್ ರಜನಿಕಾಂತ್ ಅಣ್ಣ ಸತ್ಯನಾರಾಯಣ ಗಾಯಕ್ವಾಡ್ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಣ್ಣನ ಹಾರೈಕೆಗಾಗಿ ರಜನಿಕಾಂತ್ ಚೆನ್ನೈನಿಂದ ಬೆಂಗಳೂರಿಗೆ ದೌಡಾಯಿಸಿ ಬಂದಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ರಜನಿಕಾಂತ್ ಅಣ್ಣ ಸತ್ಯನಾರಾಯಣ ಗಾಯಕ್ವಾಡ್ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಹೀಗಾಗಿ ಖುದ್ದು ರಜನಿಕಾಂತ್ ಚೆನ್ನೈನಿಂದ ಬೆಂಗಳೂರಿಗೆ ಬಂದು ಅಣ್ಣನ ಮನವೊಲಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಸಲಹೆಯಂತೆ ಒಂದೆರೆಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತೆ


