#Exclusive NewsTop Newsಫ್ರೀಡಂ ಟಿವಿ ವಿಶೇಷವಿಶೇಷವೈರಲ್ ನ್ಯೂಸ್ಸಿನಿಮಾಸುದ್ದಿ
ಸೂಪರ್ ಸ್ಟಾರ್ ರಜನಿಕಾಂತ್ಗೆ ಆರೋಗ್ಯದಲ್ಲಿ ಏರು-ಪೇರು ಆಸ್ಪತ್ರೆಗೆ ದಾಖಲು!

ಕಾಲಿವುಡ್ ನಟ ರಜನಿಕಾಂತ್ ಅವರಿಗೆ ಈಗ 73 ವರ್ಷ. ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಆತಂಕಗೊಂಡಿದ್ದಾರೆ. ಅವರ ನಟನೆಯ ‘ವೆಟ್ಟೈಯಾನ್’ ಸಿನಿಮಾ ರಿಲೀಸ್ ಸಂದರ್ಭದಲ್ಲೇ ಈ ರೀತಿ ಆಗಿದೆ.
ರಜನಿಕಾಂತ್ ಅವರಿಗೆ ಸೆಪ್ಟೆಂಬರ್ 30ರ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ತಕ್ಷಣವೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ ವೇಳೆ ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗಿದೆ. ಹೃದಯರೋಗ ತಜ್ಞ ಸಾಯಿ ಸತೀಶ್ ಅವರು ರಜನಿ ಅವರನ್ನು ಪರೀಕ್ಷೆ ಮಾಡಿದ್ದಾರೆ. ಈಗ ರಜನಿಕಾಂತ್ ಆರೋಗ್ಯ ಸುಸ್ಥಿರವಾಗಿದೆ.
ಇಂದು (ಅಕ್ಟೋಬರ್ 1) ಅಪೋಲೋ ಆಸ್ಪತ್ರೆಯಲ್ಲಿ ರಜನಿಕಾಂತ್ ಅವರ ಹೃದಯದ ಪರೀಕ್ಷೆ ನಡೆಯಲಿದೆ. ಈ ವೇಳೆ ಕೆಲವು ಚಿಕಿತ್ಸೆಗಳನ್ನು ರಜನಿಕಾಂತ್ಗೆ ನೀಡಲಾಗುತ್ತಿದೆ ಎನ್ನಲಾಗಿದೆ. ಸದ್ಯ ರಜನಿಕಾಂತ್ ಫ್ಯಾನ್ಸ್ ಸಾಕಷ್ಟು ಆತಂಕಗೊಂಡಿದ್ದಾರೆ.




