ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ..
ಈ ಮೊದಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ವಜಾ ಮಾಡಿತ್ತು. ಇದನ್ನು ಪುನರ್ ಪರಿಶೀಲನೆ ಮಾಡುವಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠಕ್ಕೆ ಪವಿತ್ರಾ ಮನವಿ ಮಾಡಿದ್ದರು. ಆದರೆ, ಇದನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪರ್ದಿವಾಲ್ ಮತ್ತು ಆರ್. ಮಹಾದೇವನ್ ಅವರ ಪೀಠ ಅರ್ಜಿ ವಜಾ ಮಾಡಿದೆ.
ನಾವು ತೀರ್ಪು ಮತ್ತು ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಆ ಬಳಿಕವೇ ಆದೇಶ ನೀಡಿದ್ದೆವೆ. ಮತ್ತೋಮ್ಮೆ ಪರಿಶೀಲನೆ ನಡೆಸಿ ಆದೇಶ ಮಾಡುವ ಅಗತ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದರಿಂದ ಅವರಿಗೆ ದೊಡ್ಡ ಹಿನ್ನಡೆ ಆಗಿದ್ದು, ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.


