Thursday, November 20, 2025
19.1 C
Bengaluru
Google search engine
LIVE
ಮನೆ#Exclusive NewsTop Newsಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್! ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್! ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಹಾಸನ ಮಾಜಿ ಸಂಸದ, ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಕಳೆದ ಅಕ್ಟೋಬರ್‌ 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಜ್ಚಲ್‌, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು.

ಪ್ರಜ್ವಲ್‌ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ವಿರುದ್ಧ ಕಳೆದ ಏಪ್ರಿಲ್‌ 28ರಂದು ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದರು. ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿತ್ತು. ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್‌ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿತ್ತು. 2015 ರಲ್ಲಿ ಹೆಚ್.ಡಿ.ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದರು. ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments