ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿಯ ಒಳಗಡೆಯೇ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಒಳ ಮೀಸಲಾತಿ ಕಾನೂನು ಬದ್ಧ ಎಂದು ಹೇಳುವ ಮೂಲಕ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಯಾವ ಜಾತಿ, ಪಂಗಡಗಳಿಗೆ ಒಳ ಮೀಸಲಾತಿ ನೀಡಬೇಕೆಂಬ ಅಧಿಕಾರವನ್ನು ಕೋರ್ಟ್ ರಾಜ್ಯಗಳ ವಿವೇಚನೆಗೆ ನೀಡಿದೆ. ಮೀಸಲಾತಿ ವ್ಯಾಪ್ತಿಯಲ್ಲೇ ಒಳಮೀಸಲಾತಿಗೆ ಅವಕಾಶ ನೀಡಿರುವ ಕೋರ್ಟ್ ಎಸ್ಸಿ ಎಸ್ಟಿ ಪರ ಮೀಸಲಾತಿ 6:1 ತೀರ್ಪು ನೀಡಿದೆ. ಮುಖ್ಯ ನ್ಯಾಯಮೂತ್ರಿ ಚಂದ್ರಚೂಡ್ ನೇತೃತ್ವದ ನ್ಯಾ.ಬಿಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸಂವಿಧಾನ ಪೀಠ ಈ ಮಹತ್ವದ ಆದೇಶ ನೀಡಿದೆ.


