Tuesday, January 27, 2026
26.7 C
Bengaluru
Google search engine
LIVE
ಮನೆಜಿಲ್ಲೆಬಿಲ್ಕಿಸ್ ಭಾನು ಅತ್ಯಾಚಾರಿಗಳಿಗೆ ಮತ್ತೆ ಜೈಲು ಗುಜರಾತ್ ಸರ್ಕಾರದ ನಡೆಗೆ ಸುಪ್ರೀಂ ಛಾಟಿ..!

ಬಿಲ್ಕಿಸ್ ಭಾನು ಅತ್ಯಾಚಾರಿಗಳಿಗೆ ಮತ್ತೆ ಜೈಲು ಗುಜರಾತ್ ಸರ್ಕಾರದ ನಡೆಗೆ ಸುಪ್ರೀಂ ಛಾಟಿ..!

2002ರಲ್ಲಿ ನಡೆದ ಗುಜರಾತ್ ಗಲಭೆಗಳ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಅವಧಿಪೂರ್ವ ಬಿಡುಗಡೆಗೆ ಅನುಮತಿ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.

ಅಲ್ಲದೆ, ಪ್ರಕರಣದ ನಿರ್ದಿಷ್ಟ ವಿವರಗಳು ಮತ್ತು ಸಂದರ್ಭಗಳನ್ನು ಎಚ್ಚರಿಕೆಯಿಂದ ಪರಿಗಣಿಸದೆ, ಈ ತೀರ್ಪನ್ನು ಏಕರೂಪವಾಗಿ ನೀಡಲಾಗಿದೆ. ಈ ನಿರ್ಧಾರವನ್ನು ಪ್ರಕಟಿಸುವಾಗ ನ್ಯಾಯಾಲಯವು ಹೆಚ್ಚು ಸೂಕ್ಷ್ಮ ಮತ್ತು ಚಿಂತನಶೀಲ ವಿಧಾನವನ್ನು ಅಳವಡಿಸಿಕೊಂಡಿಲ್ಲ ಎಂದಿದೆ. ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು, ಪ್ರಕರಣದ ಅಪರಾಧಿಗಳು ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸೂಚಿಸಿದೆ.

 

 

ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನು ಸಲ್ಲಿಸಿದ್ದ ಅರ್ಜಿ ಸೇರಿದಂತೆ ಇತರ ಅರ್ಜಿಗಳಿಗೆ ಸಂಬಂಧಿಸಿದಂತೆ 11 ದಿನಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಕಳೆದ ವರ್ಷ ಅಕ್ಟೋಬರ್ 12 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ತೀರ್ಪನ್ನು ಕಾಯ್ದಿರಿಸುವಾಗ, 11 ಅಪರಾಧಿಗಳಿಗೆ ಶಿಕ್ಷೆಯ ವಿನಾಯಿತಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಅಕ್ಟೋಬರ್ 16 ರೊಳಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಗುಜರಾತ್ ಸರ್ಕಾರಕ್ಕೆ ಸೂಚಿಸಿತ್ತು.

ಆರೋಪ ಸಾಬೀತಾಗಿ 11 ಅಪರಾಧಿಗಳು 15ಕ್ಕೂ ಹೆಚ್ಚು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದರು. ಗುಜರಾತ್ ಸರ್ಕಾರ ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆಗೆ ಅನುಮತಿ ನೀಡಿತ್ತು. ಹೀಗಾಗಿ 2022ರ ಆಗಸ್ಟ್ 15ರಂದು ಅವರೆಲ್ಲರೂ ಗೋಧ್ರಾ ಉಪ ಕಾರಾಗೃಹದಿಂದ ಬಿಡುಗಡೆಯಾಗಿದ್ದರು. ಇದೀಗ ಗುಜರಾತ್ ಸರ್ಕಾರದ ನಡೆಗೆ ವಿರುದ್ಧವಾಗಿ ಸುಪ್ರಿಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು ಇದು ಐತಿಹಾಸಿಕ ತೀರ್ಪು ಎನಿಸಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments