
ಪ.ಬಂಗಾಳದಲ್ಲಿ ರಾಜಕೀಯ ಉದ್ವಿಗ್ನತೆ ಸೃಷ್ಟಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನೂತನ ಸಿಎಂ ಎಂದು ಬಿಜೆಪಿಯ ಸುವೇಂದು ಅಧಿಕಾರಿ ಅವರ ಹೆಸರು ಚಾಲ್ತಿಗೆ ಬರುತ್ತಿದ್ದಂತೆ ಅವರ ಆಪ್ತ ಸಹಾಯಕನನ್ನು ಬರ್ಬರ ಹತ್ಯೆ ಮಾಡಲಾಗಿದ್ದು ಈ ಘಟನೆ ರಾಜಕೀಯ ವಲಯದಲ್ಲಿ ದೊಡ್ಡ ಆಘಾತ ಸೃಷ್ಟಿಸಿದೆ.ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ ಅವರನ್ನು ಗುಂಡಿಟ್ಟು ಕೊಲ್ಲಲಾಗಿದೆ. ಈ ಘಟನೆ ರಾಜ್ಯದ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಇದರಿಂದ ಬಂಗಾಳದಲ್ಲಿ ಮತ್ತಷ್ಟು ಉದ್ವಿಗ್ನತೆ ಹೆಚ್ಚಾಗಿದೆ.ಬುಧವಾರ ರಾತ್ರಿ ಸುಮಾರು 10.20 ಕ್ಕೆ ಕೋಲ್ಕತ್ತಾ ವಿಮಾನ ನಿಲ್ದಾಣದ ಸಮೀಪದ ಮಧ್ಯಮಗ್ರಾಮ್ ಲೇನ್‌ನಲ್ಲಿ ಮೋಟಾರ್‌ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಸುವೆಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಾತ್ ಅವರನ್ನು ಹತ್ಯೆ ಮಾಡಿದ್ದಾರೆ.

ಪಾಯಿಂಟ್ ಬ್ಲಾಂಕ್ ರೇಂಜ್ನಲ್ಲಿ ಹತ್ಯೆ ಮಾಡಿದ್ದು, ಮತ್ತೊಬ್ಬ ಸಹಾಯಕ ಬುದ್ಧದೇಬ್ ಬೇರಾ ಅವರು ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ.ಮನೆಗೆ ಮರಳುವಾಗ ಸ್ಕಾರ್ಪಿಯೊ ಮತ್ತು ಮೋಟಾರ್‌ಸೈಕಲ್‌ನಲ್ಲಿ ಬಂದ ಗನ್ಮ್ಯಾನ್ಗಳು ಅನೇಕ ಸುತ್ತು ಗುಂಡು ಹಾರಿಸಿ ಆಪ್ತ ಸಹಾಯಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.294 ಸದಸ್ಯ ಬಲದ ವಿಧಾನಸಭೆಯಲ್ಲಿ 207 ಸ್ಥಾನಗಳೊಂದಿಗೆ ಬಂಗಾಳ ಬಿಜೆಪಿಗೆ ಭಾರಿ ಬಹುಮತ ಪಡೆದ ಬೆನ್ನಲ್ಲೇ ಈ ಆಘಾತಕಾರಿ ಅಪರಾಧ ಜರುಗಿದೆ.




