#Exclusive NewsTop News

‘ಲಾಪತಾ ಲೇಡಿಸ್’ ಬೆನ್ನಲ್ಲೇ ಆಸ್ಕರ್‌ಗೆ ಪ್ರವೇಶ ಪಡೆದ ‘ಸ್ವಾತಂತ್ರ‍್ಯ ವೀರ್ ಸಾವರ್ಕರ್’ ಚಿತ್ರ

‘ಲಾಪತಾ ಲೇಡಿಸ್’ ಬೆನ್ನಲ್ಲೇ ಬಾಲಿವುಡ್ ನಟ ರಣ್‌ದೀಪ್ ಹೂಡಾ (Randeep Hooda) ನಟಿಸಿ, ನಿರ್ದೇಶಿಸಿರುವ ‘ಸ್ವಾತಂತ್ರ‍್ಯ ವೀರ್ ಸಾವರ್ಕರ್’ ಚಿತ್ರವು ಅಧಿಕೃತವಾಗಿ 2025ರ (Oscar 2025) ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಇದನ್ನೂ ಓದಿ:ಹಿಂದಿ ಬಿಗ್ ಬಾಸ್‌ಗೆ ಎಂಟ್ರಿ ಕೊಡ್ತಾರಾ ಮಹೇಶ್ ಬಾಬು ಸಂಬಂಧಿ?

ಆಮೀರ್‌ ಖಾನ್‌ ನಿರ್ಮಾಣದ ‘ಲಾಪತಾ ಲೇಡಿಸ್‌’ ಚಿತ್ರ ಆಸ್ಕರ್‌ ಆಯ್ಕೆಯಾದ ಬೆನ್ನಲ್ಲೇ ಈಗ ಈ ಸಿನಿಮಾ ಆಸ್ಕರ್ 2025ಕ್ಕೆ ಅಧಿಕೃತವಾಗಿ ಪ್ರವೇಶ ಪಡೆದಿದೆ. ಈ ಜೀವನಚರಿತ್ರೆಯಾಧಾರಿತ ಸಿನಿಮಾವೂ ಸ್ವಾತಂತ್ರ‍್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಜೀವನಗಾಥೆಯನ್ನು ಹೊಂದಿದೆ. ಈ ಸಿನಿಮಾದಲ್ಲಿ ರಣ್‌ದೀಪ್ ಹೂಡಾ ಜೊತೆ ಬಾಲಿವುಡ್ ನಟಿ ಅಂಕಿತಾ ಲೋಖಂಡೆ (Ankitha Lokhande) ನಟಿಸಿದ್ದರು. ಈ ಚಿತ್ರ ಕಳೆದ ವರ್ಷ 2024ರಲ್ಲಿ ತೆರೆಕಂಡಿತ್ತು.

ಈ ಸಿನಿಮಾವೀಗ ಆಸ್ಕರ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಚಿತ್ರದ ನಿರ್ಮಾಪಕ ಸಂದೀಪ್ ಈ ಖುಷಿಯ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಂತಸದ ಜೊತೆ ಹೆಮ್ಮೆ ಹಾಗೂ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಗೌರವ ಹಾಗೂ ವಿನಮ್ರತೆ, ನಮ್ಮ ಸಿನಿಮಾ ‘ಸ್ವಾತಂತ್ರ‍್ಯ ವೀರ್ ಸಾವರ್ಕರ್’ ಅಧಿಕೃತವಾಗಿ ಆಸ್ಕರ್‌ಗೆ ಆಯ್ಕೆಯಾಗಿದೆ. ಈ ಚಿತ್ರವನ್ನು ಗುರುತಿಸಿದ ‘Film Federation Of India’ ತಂಡಕ್ಕೆ ಧನ್ಯವಾದಗಳು. ನಮ್ಮನ್ನು ಬೆಂಬಲಿಸಿದವರಿಗೂ ಧನ್ಯವಾದಗಳು ಎಂದಿದ್ದಾರೆ.

Comments (0)

Your email address will not be published. Required fields are marked *

Back to top button