ಬೆಂಗಳೂರು: ಸ್ವಾತಿ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ಆಕೆಯ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಾಸಕ ಯು.ಬಿ.ಬಣಕಾರ್ ಅವರೊಟ್ಟಿಗೆ ಶಿವಾನಂದ್ ಪಾಟೀಲ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು.
ಮಾಸೂರು ಗ್ರಾಮದ ಸ್ವಾತಿ ಹತ್ಯೆ ಪ್ರಕರಣ ವಿವರಿಸಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ರು. ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಸಂತ್ರಸ್ತೆಯ ಕುಟಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸದ್ಯ ಸ್ವಾತಿ ಹತ್ಯೆ ಪ್ರಕರಣದಲ್ಲಿ ಪೋಲಿಸರು ನಯಾಜ್, ದುರ್ಗಾಚಾರಿ, ವಿನಯ್ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.


