ಮುಂಬೈ: ಟಿ-2- ವಿಶ್ವಕಪ್ ಟೂರ್ನಿಗೆ 15 ಆಟಗಾರರ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಸಜ್ಜಾಗಿದೆ.
ರೋಹಿತ್ ಶರ್ಮಾ(ನಾಯಕ), ಹಾರ್ದಿಕ್ ಪಾಂಡ್ಯ(ಉಪನಾಯಕ), ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಶಿವಂ ದುಬೆ, ಯಶಸ್ವಿ ಜೈಸ್ವಾಲ್, ಕುಲದೀಪ್ ಯಾದವ್, ಆರ್ಷ್ದೀಪ್ ಸಿಂಗ್, ಅಕ್ಷರ್ಪಟೇಲ್, ಸಂಜು ಸ್ಯಾನ್ಸ್, ಜಸ್ಪ್ರೀತ್ ಬೂಮ್ರಾ, ಯಜುವೇಂದ್ರ ಚಹಲ್, ಸಿರಾಜ್ಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಯುವ ಆಟಗಾರ ಯಶಸ್ವಿ ಜೈಸ್ವಾಲ್ ಈ ಬಾರಿ ಆಯ್ಕೆ ಆಗಿದ್ದಾರೆ. ಇನ್ನು ಕನ್ನಡಿಗ ಕೆ.ಎಲ್.ರಾಹುಲ್ ಫಿಟ್ ಆಗಿದ್ದರೂ ಆಯ್ಕೆಯಾಗಿಲ್ಲ. ಮುರಳಿ ಕಾರ್ತಿಕ್ ಕೂಡ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.