Wednesday, January 28, 2026
16.4 C
Bengaluru
Google search engine
LIVE
ಮನೆಕ್ರಿಕೆಟ್ಭಾರತ vs ಪಾಕಿಸ್ತಾನ್: ಹೈವೊಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರು

ಭಾರತ vs ಪಾಕಿಸ್ತಾನ್: ಹೈವೊಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರು

ಭಾರತ ಮತ್ತು ಪಾಕಿಸ್ತಾನ್ ನಡುವೆ ಹೈವೊಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಭಾನುವಾರ (ಜೂ.9) ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವನ್ನು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಕಳೆದ ಬಾರಿಯ ಟಿ20 ವಿಶ್ವಕಪ್​ನಲ್ಲಿ ರಣರೋಚಕ ಹೋರಾಟ ನಡೆಸಿದ್ದ ಉಭಯ ತಂಡಗಳು ಇಂದೂ ಸಹ ಭರ್ಜರಿ ಪೈಪೋಟಿ ನೀಡುವ ನಿರೀಕ್ಷೆಯಿದೆ.

ಅದರಲ್ಲೂ ನಸ್ಸೌ ಕೌಂಟಿ ಪಿಚ್​ ಬೌಲರ್​ಗಳಿಗೆ ಸಹಕಾರಿ ಎಂಬುದು ಈಗಾಗಲೇ ಸಾಬೀತಾಗಿದೆ. ಅತ್ತ ಪಾಕಿಸ್ತಾನ್ ತಂಡದಲ್ಲಿ ಅತ್ಯುತ್ತಮ ಬೌಲರ್​ಗಳಿದ್ದರೆ, ಇತ್ತ ಭಾರತ ತಂಡದಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದೆ. ಹೀಗಾಗಿ ಇಂದಿನ ಪಂದ್ಯವು ಬ್ಯಾಟರ್ ಮತ್ತು ಬೌಲರ್​ಗಳ ನಡುವಣ ಅಸಲಿ ಕದನವಾಗಿ ಮಾರ್ಪಡಲಿದೆ.

ಎಷ್ಟು ಗಂಟೆಗೆ ಪಂದ್ಯ ಶುರು?

ಈ ಪಂದ್ಯವು ಅಮೆರಿಕ ಕಾಲಮಾನ ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಅಲ್ಲಿ ಡೇ ಪಂದ್ಯವಾಗಿದ್ದರೂ, ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯದ ನೇರ ಪ್ರಸಾರ ಇರಲಿದೆ.

ಉಭಯ ತಂಡಗಳು:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments