ನಾರ್ತ್ ಸೌಂಡ್ : ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವೆ ನಡೆದ 2024ರ ಟಿ20 ವಿಶ್ವಕಪ್‌ನ ಸೂಪರ್-8 ಪಂದ್ಯದಲ್ಲಿ ಭಾರತ 196 ರನ್ ಗಳಿಸುವ ಮೂಲಕ ಭರ್ಜರಿ ಜಯ ಗಳಿಸಿದೆ.

ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟ್ ಬೀಸಿದ ಭಾರತ ಒಟ್ಟು 20 ಓವರ್‌ಗಳಲ್ಲಿ 196 ರನ್ ಗಳಿಸಿ ಬಾಂಗ್ಲಾದೇಶಕ್ಕೆ 197 ರನ್‌ಗಳ ಗುರಿ ನೀಡಿತು. 197 ರನ್‌ಗಳ ಬೆನ್ನಟ್ಟಿದ ಬಾಂಗ್ಲಾ 20 ಓವರ್‌ಗಳಲ್ಲಿ 146 ರನ್‌ಗಳಿಸಿ ಸೋಲನ್ನು ಅನುಭವಿಸಿತು.

ಭಾರತ ತಂಡದಿಂದ ಓಪನಿಂಗ್ ಬ್ಯಾಟ್ಸ್ಮನ್‌ಗಳಾಗಿ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬ್ಯಾಟ್ ಬೀಸಿದರು. 11 ಎಸೆತಗಳಿಗೆ 23 ರನ್ ಸಿಡಿಸಿ ರೋಹಿತ್ ಶರ್ಮಾ ಔಟಾಗುವ ಮೂಲಕ ಟೀಂ ಇಂಡಿಯಾದ ಮೊದಲ ವಿಕೆಟ್ ಪತನಗೊಂಡಿತು. 11 ಬಾಲ್‌ಗಳಲ್ಲಿ ರೋಹಿತ್ ಶರ್ಮಾ 3 ಫೋರ್ ಹಾಗೂ 1 ಸಿಕ್ಸ್ ಸಿಡಿಸಿ ಒಟ್ಟು 23 ಅಂಕಗಳನ್ನು ತಂಡಕ್ಕೆ ಗಳಿಸಿಕೊಟ್ಟರು. ವಿರಾಟ್ ಕೊಹ್ಲಿ 28 ಬಾಲ್‌ಗಳಿಗೆ ಒಟ್ಟು 37 ರನ್ ಸಿಡಿಸಿ 2ನೇ ವಿಕೆಟ್ ಬಿಟ್ಟುಕೊಟ್ಟರು.
ಬಳಿಕ ಕ್ರೀಸ್‌ಗೆ ಬಂದ ಸೂರ್ಯಕುಮಾರ್ ಯಾದವ್ ಮೊದಲ ಎಸೆತಕ್ಕೆ ಸಿಕ್ಸ್ ಬಾರಿಸಿ ಎರಡನೇ ಬಾಲ್ ಅನ್ನು ವಿಕೆಟ್ ಕೀಪರ್ ಕೈಗೆ ಕ್ಯಾಚ್ ನೀಡುವ ಮೂಲಕ ಒಟ್ಟು 6 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ರಿಷಭ್ ಪಂತ್ 4 ಫೋರ್ ಹಾಗೂ 2 ಸಿಕ್ಸ್ ಸಿಡಿಸಿ 24 ಬಾಲ್‌ಗಳಿಗೆ ಒಟ್ಟು 36 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ನಂತರ ಕ್ರೀಸ್‌ಗೆ ಮರಳಿದ ಶಿವಂ ದುಬೆ 24 ಎಸೆತಗಳಿಗೆ 34 ರನ್ ಸಿಡಿಸಿ ಔಟಾದರು. ಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ಜೊತೆಯಾಟವಾಡಿ ತಂಡಕ್ಕೆ 54 ರನ್ ಗಳಿಸಿಕೊಟ್ಟರು. ಅಕ್ಷರ್ ಪಟೇಲ್ 5 ಎಸೆತಗಳಿಗೆ 3 ರನ್ ಗಳಿಸಿ ಔಟಾಗದೇ ಆಟವನ್ನು ಕೊನೆಗೊಳಿಸಲು ಸಹಕರಿಸಿದರು. ಹಾರ್ದಿಕ್ ಪಾಂಡ್ಯ ಕೊನೆಯ 1 ಬಾಲ್‌ನಲ್ಲಿ ಫೋರ್ ಸಿಡಿಸಿ 27 ಎಸೆತಗಳಿಗೆ ಅರ್ಧಶತಕ ಪೂರ್ಣಗೊಳಿಸಿ ಔಟಾಗದೇ ಆಟವನ್ನು ಕೊನೆಗೊಳಿಸಿ ಬಾಂಗ್ಲಾದೇಶಕ್ಕೆ 197 ರನ್‌ಗಳ ಗುರಿ ನೀಡಿದರು.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com


