ರಾಜಕೀಯರಾಜ್ಯಸುದ್ದಿ

ಜ. 6ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್​ ಮೇಲೆ ಕ್ರಮ ತೆಗೆದುಕೊಳ್ಳಬೇಕು- ಡಿಕೆಶಿ ಗರಂ

ದೇವನಹಳ್ಳಿ:  ರಾಜ್ಯ ಕಾಂಗ್ರೆಸ್​​ ಸರ್ಕಾರದಲ್ಲಿ ನಾಯಕತ್ವದ ಬದಲಾವಣೆ ಚರ್ಚೆ ಮತ್ತೆ ಜೋರಾಗಿದೆ. ಶಾಸಕ ಇಕ್ಬಾಲ್​​ ಹುಸೇನ್​​​ ಅವರು ಜನವರಿ 6 ರಂದು ಡಿಸಿಎಂ ಡಿ.ಕೆ ಶಿವಕುಮಾರ್​ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಹೇಳಿಕೆ ಸದ್ಯ ಸಂಚನ ಸೃಷ್ಟಿಸಿದೆ. ಇದೀಗ ಡಿಕೆ ಶಿವಕುಮಾರ್​ ಆಪ್ತ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ವಿಚಾರಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಪ್ರತಿಕ್ರಿಯಿಸಿದ್ದು, ಇಕ್ಬಾಲ್​ ಹುಸೇನ್​ ಮಾತನ್ನು ಯಾರು ನಂಬಬೇಡಿ. ಹುಸೇನ್​ ಮೇಲೆ ಮೊದಲು ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ದೇವನಹಳ್ಳಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಇಕ್ಬಾಲ್​ ಹುಸೇನ್​ಗೆ​ ಮಾತಿನ ಚಟ. ಯಾರು ಅವನ ಮಾತನ್ನು ನಂಬಲು ಹೋಗಬೇಡಿ ಎಂದು ಸಿಡಿಮಿಡಿಗೊಂಡಿದ್ದಾರೆ. ಇನ್ನು ಶಾಸಕ ಇಕ್ಬಾಲ್ ಹುಸೇನ್​ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 140 ಶಾಸಕರಿಗೂ ಡಿ.ಕೆ.ಶಿವಕುಮಾರ್​ ಅಧ್ಯಕ್ಷರು. ಮೊದಲು ನೋಟಿಸ್​ ಕೊಟ್ಟಿದ್ದಾರೆ, ಈಗಲೂ ಒಂದೆರಡು ಕೊಡಲಿ. ನೋಟಿಸ್​ ಕೊಟ್ಟರೆ ನಾನು ಪಾಲನೆ ಮಾಡಬೇಕಾಗುತ್ತೆ. ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ನಾನು ಹೈಕಮಾಂಡ್ ಹೇಳಿದ್ದಂತೆ ಕೇಳುತ್ತೇನೆ ಎಂದಿದ್ದಾರೆ. ಆ ಮೂಲಕ ಸಿಎಂ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button