ಕ್ರೈಂ ಸ್ಟೋರಿರಾಜ್ಯ

ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ವಿಜಯಪುರ: ಭೀಮಾ ತೀರದ ರೌಡಿ ಬಾಗಪ್ಪ ಹರಿಜನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ಪೋಲಿಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಜಯಪುರದ ಎರಡನೇ ಹೆಚ್ಚುವರಿ ಹಾಗೂ ವಿಶೇಷ ನ್ಯಾಯಾಲಯವು 4 ಜನ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿಗಳಾದ ಪ್ರಕಾಶ್ ಅಲಿಯಾಸ್ ಪಿಂಟ್ಯಾ ಮೇಲಿನಕೇರಿ, ರಾಹುಲ್ ತಳಕೇರಿ, ಮಣಿಕಂಠ ಬೆನಕೊಪ್ಪ ಮತ್ತು ಸುದೀಪ್ ಕಾಂಬಳೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.  ನ್ಯಾಯಾಲಯದ ಆದೇಶದ ಮೇರೆಗೆ ಆರೋಪಿಗಳನ್ನು ದರ್ಗಾ ಜೈಲಿಗೆ ಕರೆದೊಯ್ಯಲಾಗಿದೆ

Comments (0)

Your email address will not be published. Required fields are marked *

Back to top button