Top Newsಸುದ್ದಿ

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಜೈಲಿನಿಂದ ರಿಲೀಸ್

ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ 6 ವಾರಗಳ ಕಾಲದ ನಂತರ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದಾರೆ.

ಬೆನ್ನು ನೋವಿನಿಂದ ಬಳುತ್ತಿದ್ದ ದರ್ಶನ್‌ಗೆ ಚಿಕಿತ್ಸೆಗಾಗಿ 6 ವಾರಗಳ ಕಾಲ ಬೇಲ್ ಸಿಕ್ಕಿದೆ. ಈ ಹಿನ್ನೆಲೆ ಕುಂಟುತ್ತಲೇ ದರ್ಶನ್ ಹೈ ಸೆಕ್ಯೂರಿಟಿ ಸೆಲ್‌ನಿಂದ ಹೊರಬಂದಿದ್ದಾರೆ. 5 ತಿಂಗಳುಗಳ ಕಾನೂನು ಸಮರ ನಂತರ ಇಂದು ದರ್ಶನ್ ಬಿಡುಗಡೆಯಾಗಿದ್ದಾರೆ. ಈ ವೇಳೆ, ದರ್ಶನ್ ನೋಡಲು ಸಾವಿರಾರು ಸಂಖ್ಯೆ ನಟನ ಫ್ಯಾನ್ಸ್ ಜೈಲಿನ ಬಳಿ ಜಮಾಯಿಸಿದ್ದರು.

ಅಂದಹಾಗೆ, ಜೂನ್ 11ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದರು.

Comments (0)

Your email address will not be published. Required fields are marked *

Back to top button