Uncategorized

ಯಶ್ ‘ಟಾಕ್ಸಿಕ್’ ಅಬ್ಬರ; 42 ಕೋಟಿಗೆ ಮಾರಾಟವಾಯ್ತು ಸಂಗೀತ ಹಕ್ಕು

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಈ ಚಿತ್ರದ ಸಂಗೀತ ಹಕ್ಕುಗಳು ಬರೋಬ್ಬರಿ 42 ಕೋಟಿ ರೂಪಾಯಿಗಳಿಗೆ ಮಾರಾಟವಾಗುವ ಮೂಲಕ ಸ್ಯಾಂಡಲ್‌ವುಡ್‌ನ ಗತ್ತು ಏರಿಸಿವೆ. ಪ್ರಸಿದ್ಧ ಸಂಗೀತ ಸಂಸ್ಥೆ ಜೀ ಮ್ಯೂಸಿಕ್ ಈ ಹಕ್ಕುಗಳನ್ನು ತನ್ನದಾಗಿಸಿಕೊಂಡಿದ್ದು, ಇದು ಬಾಲಿವುಡ್‌ನ ಬಹುನಿರೀಕ್ಷಿತ ‘ಧುರಂಧರ್ 2’ ಚಿತ್ರದ ಮ್ಯೂಸಿಕ್ ಡೀಲ್‌ಗಿಂತಲೂ ಹೆಚ್ಚಿನ ಮೊತ್ತವಾಗಿದೆ ಎಂಬುದು ವಿಶೇಷ.

ಸೋಶಿಯಲ್ ಮೀಡಿಯಾದಲ್ಲಿ ಸದ್ಯ ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ನಡುವೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ‘ಧುರಂಧರ್ 2’ ಚಿತ್ರದ ಸಂಗೀತ ಹಕ್ಕುಗಳು 27 ಕೋಟಿ ರೂಪಾಯಿಗಳಿಗೆ ಮಾರಾಟವಾಗಿದ್ದರೆ, ಯಶ್ ಸಿನಿಮಾ ಅದಕ್ಕಿಂತ 15 ಕೋಟಿ ರೂಪಾಯಿ ಹೆಚ್ಚು ಗಳಿಸಿ ದಾಖಲೆ ಬರೆದಿದೆ


‘ಟಾಕ್ಸಿಕ್’ ಚಿತ್ರದ ಹೈಪ್ ಹೆಚ್ಚಲು ಮುಖ್ಯ ಕಾರಣ ಸಿನಿಮಾದಲ್ಲಿರುವ ಐವರು ಘಟಾನುಘಟಿ ಸಂಗೀತ ನಿರ್ದೇಶಕರು. ಚಿತ್ರದಲ್ಲಿ ಒಟ್ಟು 6 ಹಾಡುಗಳಿದ್ದು, ಸಂಗೀತ ಸಂಯೋಜನೆಯ ಜವಾಬ್ದಾರಿಯನ್ನು ಹಂಚಿಕೊಂಡಿದ್ದಾರೆ:ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ಈ ಚಿತ್ರದ 4 ಪ್ರಮುಖ ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಒಂದು ಹಾಡಿನ ಜೊತೆಗೆ ಚಿತ್ರದ ಹಿನ್ನೆಲೆ ಸಂಗೀತದ ಜವಾಬ್ದಾರಿ ಹೊತ್ತಿದ್ದಾರೆ.ತನಿಷ್ಕ್ ಬಾಗ್ಚಿ, ಅರ್ಸ್ಲಾನ್ ನಿಜಾಮಿ ಮತ್ತು ಫಹೀಮ್ ಅಬ್ದುಲ್ಲಾ ಮೂವರು ಸೇರಿ ಒಂದು ಹಾಡನ್ನು ಸಂಯೋಜಿಸಿದ್ದಾರೆ.ಬಾಲಿವುಡ್ ಮತ್ತು ಸ್ಯಾಂಡಲ್‌ವುಡ್‌ನ ಈ ಅಪರೂಪದ ಸಮಾಗಮವು ಚಿತ್ರದ ಮೇಲೆ ಭಾರೀ ನಿರೀಕ್ಷೆ ಮೂಡಿಸಿದೆ.

Comments (0)

Your email address will not be published. Required fields are marked *

Back to top button