Top Newsರಾಜಕೀಯರಾಜ್ಯಸುದ್ದಿ

ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯ, ಪತ್ನಿಗೆ ಕ್ಲೀನ್ ಚಿಟ್: ನಂಗೆ ಗೊತ್ತಿಲ್ರಿ ಎಂದ ಸಿಎಂ!

ಬೆಂಗಳೂರು: ಮುಡಾ ಕೇಸಲ್ಲಿ ಕ್ಲೀನ್ ಚಿಟ್ ವಿಚಾರವೇ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವದಂತಿಯನ್ನು ತಳ್ಳಿಹಾಕಿದ್ದಾರೆ.

ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ಸುದ್ದಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಹೀಗೆ ಪ್ರತಿಕ್ರಿಯಿಸಿದರು. ನನಗೆ ಆ ಬಗ್ಗೆ ಗೊತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇನ್ನು ಇನು ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಗೆ ಹೋಗಬೇಕಿತ್ತು, ಆದರೆ ಬಜೆಟ್ ತಯಾರಿ ಇದೆ ಹೀಗಾಗಿ ಹೋಗಲು ಸಾಧ್ಯವಿಲ್ಲ. ಕಳೆದ ವರ್ಷವೂ ನಾನು ಹೋಗಿರಲಿಲ್ಲ ಎಂದು ತಿಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ, ಡಿಸಿಎಂ ಡಿಕೆಶಿ ಸಿಎಂ ಆಗಬೇಕು ಎಂಬ ಕೂಗು ಹಾಗೂ ಪೂಜೆ ವಿಚಾರವಾಗಿ, ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದ್ದಾರೆ.

Comments (0)

Your email address will not be published. Required fields are marked *

Back to top button