Top News
ತಮಿಳುನಾಡು ಚುನಾವಣೆ 2026; ಗಡಿಯಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ!

ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಹಿನ್ನೆಲೆ ಗಡಿ ಭಾಗಗಳಲ್ಲಿ ಬಿಗಿ ತಪಾಸಣೆ ನಡೆಯುತ್ತಿದ್ದು, ಹೊಸೂರಿನ ಜೂಜುವಾಡಿ ಚೆಕ್ಪೋಸ್ಟ್ನಲ್ಲಿ ಚುನಾವಣಾಧಿಕಾರಿಗಳು ನಡೆಸಿದ ತಪಾಸಣೆಯ ವೇಳೆ, ಹಿಟಾಚಿ ಕ್ಯಾಷ್ ಮ್ಯಾನೇಜ್ಮೆಂಟ್ ಸರ್ವೀಸ್ಗೆ ಸೇರಿದ ಎಟಿಎಂ ವಾಹನದಿಂದ 2.34 ಕೋಟಿ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ವಾಹನದಲ್ಲಿ ಹಣ ಸಾಗಿಸಲು ಬೇಕಾದ ಅಧಿಕೃತ ದಾಖಲೆಗಳು ಮತ್ತು ಕನಿಷ್ಠ ಭದ್ರತಾ ಶಿಷ್ಟಾಚಾರಗಳು ಇಲ್ಲದ ಕಾರಣ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಚುನಾವಣಾ ಆಯೋಗವು ಮಾರ್ಚ್ 15, 2026 ರಂದು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ನಗದು, ಮದ್ಯ ಮತ್ತು ಉಡುಗೊರೆಗಳ ಸಾಗಾಟದ ಮೇಲೆ ಅಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ. ಜೂಜುವಾಡಿ ಚೆಕ್ಪೋಸ್ಟ್ ಪ್ರಮುಖ ಗಡಿ ಪ್ರದೇಶವಾಗಿದ್ದು, ಇಲ್ಲಿ ದಿನದ 24 ಗಂಟೆಯೂ ಫ್ಲೈಯಿಂಗ್ ಸ್ಕ್ವಾಡ್ ತಂಡಗಳು ತಪಾಸಣೆ ನಡೆಸುತ್ತಿವೆ.




