ಸಿನಿಮಾ

ತಮಿಳುನಾಡು ಸಿಎಂ ವಿಜಯ್‌ಗೆ ಬಿಗ್ ರಿಲೀಫ್ – ಡಿವೋರ್ಸ್ ಅರ್ಜಿ ಹಿಂಪಡೆದ ಪತ್ನಿ ಸಂಗೀತಾ!

Big relief for Tamil Nadu CM Vijay – wife Sangeetha withdraws divorce petition!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಸಿಎಂ ಜೋಸೆಫ್ ವಿಜಯ್ ವಿರುದ್ಧ ದಾಖಲಿಸಿದ್ದ ವಿಚ್ಛೇದನ ಪ್ರಕರಣ ಅರ್ಜಿಯನ್ನು ಪತ್ನಿ ಸಂಗೀತ ಅವರು ಹಿಂದಕ್ಕೆ ಪಡೆದಿದ್ದಾರೆ.

ತಮಿಳುನಾಡು ರಾಜಕೀಯ ಹಾಗೂ ಸಿನಿಮಾ ರಂಗದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಜಯ್ ವಿಚ್ಛೇದನ ಪ್ರಕರಣ ಸುಖಾಂತ್ಯ ಕಂಡಿದೆ. ಇಂದು ಚೆಂಗಲ್‌ಪಟ್ಟು ಜಿಲ್ಲಾ ಕೋರ್ಟ್‌ನಲ್ಲಿ ವಿಜಯ್ ಪತ್ನಿ ಸಂಗೀತ ಡಿವೋರ್ಸ್‌ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ಲಂಡನ್‌ನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಸಂಗೀತಾ ಅವರು, ತಾವು ದಾಖಲಿಸಿದ್ದ ವಿಚ್ಛೇದನ ಅರ್ಜಿಯನ್ನು ವಾಪಸ್ ಪಡೆಯುತ್ತಿರುವುದಾಗಿ ತಿಳಿಸಿದರು.

ಈ ವರ್ಷದ ಫೆಬ್ರವರಿಯಲ್ಲಿ ಪತ್ನಿ ಸಂಗೀತ ಅವರು ತಮಿಳುನಾಡಿನ ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ದಾಂಪತ್ಯ ಜೀವನವನ್ನು ಅಂತ್ಯಗೊಳಿಸಲು ಕೋರಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ತಮ್ಮ ಅರ್ಜಿಯಲ್ಲಿ ಪರಸ್ಪರ ಹೊಂದಾಣಿಕೆಯಾಗದ ಭಿನ್ನಾಭಿಪ್ರಾಯಗಳನ್ನು ಕಾರಣವಾಗಿ ನೀಡಿದ್ದ ಅವರು, ಜೀವನಾಂಶ ಹಾಗೂ ಚೆನ್ನೈನ ನೀಲಂಕರೈನಲ್ಲಿರುವ ದಂಪತಿಯ ಜಂಟಿ ನಿವಾಸದಲ್ಲಿ ಮುಂದುವರಿಯಲು ಅನುಮತಿ ಕೋರಿದ್ದರು.

ಈ ವರ್ಷ ವಿಜಯ್ ಹಾಗೂ ಸಂಗೀತ ನಡುವಿನ ದಾಂಪತ್ಯ ವಿವಾದದ ವಿಚಾರಣೆ ಹಲವು ಬಾರಿ ಮುಂದೂಡಲ್ಪಟ್ಟಿತ್ತು. ಕಳೆದ ತಿಂಗಳು ನಡೆದ ವಿಚಾರಣೆ ವೇಳೆ ಇಬ್ಬರೂ ಪತಿಯು ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಆ ಕಲಾಪವನ್ನು ಆಗಸ್ಟ್ 7 ಕ್ಕೆ ಮುಂದೂಡಿದ್ದರು. ಇದೀಗ ಪತ್ನಿ ಸಂಗೀತ ಅವರೇ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button