ಜೈಪುರ: ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳನ್ನು ತುಂಬಿದ್ದ ಟ್ರಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಅವಘಡ ಸಂಭವಿಸಿ ಏಳು ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ಜೈಪುರ ಅಜ್ಮೀರ್ ಹೆದ್ದಾರಿಯಲ್ಲಿ ನಡೆದಿದೆ.. ಘಟನೆಯಲ್ಲಿ ಮೂರು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಕಿಲೋಮೀಟರ್‌ಗಳವರೆಗೆ ಗೋಚರಿಸುತ್ತಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ.
ಚಾಲಕ ರಸ್ತೆಬದಿಯಲ್ಲಿ ಟ್ರಕ್ ಅನ್ನು ನಿಲ್ಲಿಸಿ, ಊಟಕ್ಕೆಂದು ಹೋಟೆಲ್ ಹೋಗಿದ್ದ ವೇಳೆ ಟ್ಯಾಂಕರೊಂದು ತಿರುವು ಪಡೆಯುತ್ತಿದ್ದಾಗ ನಿಯಂತ್ರಣ ತಪ್ಪಿ ಸಿಲಿಂಡರ್ ತುಂಬಿದ್ದ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.


