ಚಿತ್ರದುರ್ಗ: ವಿದ್ಯಾರ್ಥಿ ಮೇಲೆ ಶಾಲೆಯ ಶಿಕ್ಷಕ ಮನಬಂದಂತೆ ಹಲ್ಲೆ ನಡೆಸಿದ ವಸತಿ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠನನ್ನು ಪೊಲೀಸರು ಬಂಧಿಸಿದ್ದಾರೆ..
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ಶಾಲೆಯಲ್ಲಿ ಘಟನೆ ನಡೆದಿದ್ದು, ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿ ಮೇಲೆ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ ಮನಸೋ ಇಚ್ಛೆ ಹಲ್ಲೆ ನಡೆಸಿದ್ದ. ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆದ ಬಳಿಕ ನಾಪತ್ತೆಯಾಗಿದ್ದ ವೀರೇಶ್‌ನನ್ನು ಪೊಲೀಸರು ಕಲಬುರಗಿಯಲ್ಲಿ ಬಂಧಿಸಿದ್ದರು.
ತಡರಾತ್ರಿ ಆರೋಪಿಯನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ನ್ಯಾಯಾಧೀಶರು 2 ದಿನ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ವೀರೇಶ್‌ನನ್ನು ಚಿತ್ರದುರ್ಗ ಜೈಲಿಗೆ ಕಳುಹಿಸಿದ್ದಾರೆ. ಶಿಕ್ಷಕ ವೀರೇಶ್ ಹಿರೇಮಠ್‌ನನ್ನು ಅಮಾನತುಗೊಳಿಸಿ ಚಿತ್ರದುರ್ಗ ಡಿಸಿ ವೆಂಕಟೇಶ್ ಆದೇಶ ಪ್ರಕಟಿಸಿದ್ದಾರೆ.
ವೇದಾಧ್ಯಯನ ಶಾಲೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪಿ ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ. ಕಲಬುರಗಿಯಲ್ಲಿ ಶಿಕ್ಷಕ ವಿರೇಶ್ ಹೀರೇಮಠ್‌ನನ್ನು ಬಂಧಿಸಲಾಗಿದೆ. ಕಾರ್ಯಾಚರಣೆ ನಡೆಸಿ ಚಿತ್ರದುರ್ಗ ಪೊಲೀಸರು, ಆತನನ್ನು ಬಂಧಿಸಿ ನಾಯಕನಹಟ್ಟಿಗೆ ಕರೆತಂದರು. ಬಳಿಕ ಚಳ್ಳಕೆರೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯ್ತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿ ವೀರೇಶ್ ಹೀರೇಮಠ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಆದೇಶಿಸಿದರು. ಇದೀಗ ಆರೋಪಿಯನ್ನು ಚಿತ್ರದುರ್ಗ ಜಿಲ್ಲಾ ಕಾರಗೃಹಕ್ಕೆ ಕಳುಹಿಸಲಾಗಿದೆ.


