Tuesday, February 10, 2026
24.4 C
Bengaluru
Google search engine
LIVE
ಮನೆದೇಶ/ವಿದೇಶಲಂಡನ್-ಬೆಂಗಳೂರು ವಿಮಾನದಲ್ಲಿ ತಾಂತ್ರಿಕ ದೋಷ; ತಪ್ಪಿದ ಭಾರಿ ಅನಾಹುತ

ಲಂಡನ್-ಬೆಂಗಳೂರು ವಿಮಾನದಲ್ಲಿ ತಾಂತ್ರಿಕ ದೋಷ; ತಪ್ಪಿದ ಭಾರಿ ಅನಾಹುತ

ಲಂಡನ್‌: ಲಂಡನ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಉಂಟಾದ ತಾಂತ್ರಿಕ ದೋಷವು ವಿಮಾನಯಾನ ಲೋಕದಲ್ಲಿ ಕ್ಷಣಕಾಲ ಆತಂಕ ಸೃಷ್ಟಿಸಿದೆ.

ಹೀಥ್ರೋ ವಿಮಾನ ನಿಲ್ದಾಣದಿಂದ ಹೊರಟಿದ್ದ ಬೋಯಿಂಗ್ 787 ವಿಮಾನದ ಇಂಧನ ಸ್ವಿಚ್ ಎರಡು ಬಾರಿ ಕಟ್ ಆಫ್ ಆಗಿದ್ದು, ಇಂಜಿನ್ ಸ್ಥಗಿತಗೊಳ್ಳುವ ಅಪಾಯವಿತ್ತು. ಆದರೆ ಸುಮಾರು 200ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಈ ವಿಮಾನವನ್ನು ಪೈಲಟ್‌ಗಳು ತಮ್ಮ ಸಮಯಪ್ರಜ್ಞೆಯಿಂದ ಸುರಕ್ಷಿತವಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಗಂಭೀರ ವಿದ್ಯಮಾನದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಏರ್ ಇಂಡಿಯಾ ಸಂಸ್ಥೆಯು ತನ್ನ ಬಳಿಯಿರುವ ಎಲ್ಲಾ 33 ಬೋಯಿಂಗ್ 787 ವಿಮಾನಗಳ ತುರ್ತು ತಪಾಸಣೆಗೆ ಆದೇಶಿಸಿದೆ. ವಿಮಾನ ತಯಾರಿಕಾ ಸಂಸ್ಥೆ ಬೋಯಿಂಗ್‌ಗೂ ಈ ಬಗ್ಗೆ ಮೌಲ್ಯಮಾಪನ ನಡೆಸುವಂತೆ ಮನವಿ ಮಾಡಲಾಗಿದ್ದು, ಡಿಜಿಸಿಎ ಈ ತಾಂತ್ರಿಕ ದೋಷದ ಬಗ್ಗೆ ತೀವ್ರ ತನಿಖೆ ಆರಂಭಿಸಿದೆ. ಸದ್ಯಕ್ಕೆ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದ್ದು, ವಿಮಾನಯಾನ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಚರ್ಚೆಗಳು ಮುನ್ನೆಲೆಗೆ ಬಂದಿವೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments