ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾಗದಲ್ಲಿ ಮೊದಲ ದಿನವೇ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದು, ಅವರ ಸುರಕ್ಷತೆಗಾಗಿ ಕ್ರಮ ಕೈಗೊಳ್ಳುವಂತೆ ಸಂಸದ ತೇಜಸ್ವಿ ಸೂರ್ಯ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು ನಗರದ ಆರ್.ವಿ ರೋಡ್ನಿಂದ ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದ್ದಾರೆ.
ರೇಷ್ಮೇ ಸಂಸ್ಥೆ ಹಾಗೂ ಮಾದಾವರ ನಡುವಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಪ್ರತಿ 4–8 ನಿಮಿಷಗಳಿಗೊಮ್ಮೆ ರೈಲುಗಳು ಸಂಚರಿಸುತ್ತಿದೆ. ಹಳದಿ ಮಾರ್ಗದಲ್ಲಿ ಪ್ರತಿ 25 ನಿಮಿಷಗಳಿಗೊಮ್ಮೆ ರೈಲುಗಳು ಸಂಚಾರ ಮಾಡುತ್ತಿದೆ. ಎರಡು ಮಾರ್ಗಗಳು ಸೇರುವ ಆರ್‌ವಿ ರಸ್ತೆ ನಿಲ್ದಾಣದಲ್ಲಿ ಜನದಟ್ಟಣೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.
ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಹಳದಿ ಮಾರ್ಗಗಳ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಸ್ಕ್ರೀನ್ ಬಾಗಿಲುಗಳು ಅಥವಾ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು. ಪ್ರಯಾಣಿಕರು ಕೂಡ ಈ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಬಿಎಂಆರ್ಸಿಎಲ್ ತಕ್ಷಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.