Top Newsರಾಜಕೀಯರಾಜ್ಯವಿಶೇಷಸುದ್ದಿ

ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ ಅದ್ದೂರಿಯಾಗಿ ನಡೆಯಿತು. ಇನ್ನು ಆರತಕ್ಷತೆ ಕಾರ್ಯಕ್ರಮಕ್ಕೆ ರಾಜಕಾರಣಿಗಳು, ಸಿನಿಮಾ ತಾರೆಯರು, ಸೇರಿದಂತೆ ಗಣ್ಯರ ದಂಡೇ ಹರಿದು ಬಂದಿತ್ತು. ಇನ್ನು ಸಿಎಂ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಜೊತೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ದರಾಮಯ್ಯ ಕಾಲು ಮುಟ್ಟಿ ಆಶಿರ್ವಾದ ಪಡೆದರು. ಇದೀಗ ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

Comments (0)

Your email address will not be published. Required fields are marked *

Back to top button