ಮಂಗಳೂರು : ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಡ್ತೀವಿ. ಕೇಂದ್ರ ರಾಜ್ಯಕ್ಕೆ ವಾಪಾಸ್ ಕೊಡುವುದು, ಸ್ಮಾರ್ಟ್ ಸಿಟಿ ಯೋಜನೆ ಸೇರಿ ಕೇವಲ 65 ಸಾವಿರ ಕೋಟಿ. ಶೇ15-16 ರಷ್ಟು ಮಾತ್ರ. ಇದು ಕೇಂದ್ರ ನಮ್ಮ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಅಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನಿ ಮೋದಿಯವರಿಗೆ ಹೇಳಿ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ನಿಲ್ಲಿಸಿ ಎಂದು ಶಾಸಕ ಕಾಮತ್ ಗೆ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.
ಮನುಷ್ಯರು ಪರಸ್ಪರ ಪ್ರೀತಿಸುವ ಸಮಾಜ ಗಟ್ಟಿಗೊಳಿಸೋಣ- ಸಿ.ಎಂ ಕರೆ
ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಮನುಷ್ಯರು ಮನುಷ್ಯರನ್ನು ಪ್ರೀತಿಸುವ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು. ಈ ಸಮಾಜವನ್ನು ನಾವು ಇನ್ನಷ್ಟು ಗಟ್ಟಿಗೊಳಿಸೋಣ. ಜೊತೆಗೆ ಅಸಮಾನತೆಯ ಸಮಾಜವನ್ನು ಸುಧಾರಿಸಿ ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಸಮಾಜ ಕಟ್ಟೋಣ ಎಂದು ಸಿದ್ದರಾಮಯ್ಯ ಕರೆ ನೀಡಿದರು.
ಅತ್ಯಂತ ಪ್ರಜ್ಞಾವಂತರೇ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆಗಳು ನಡೆಯಬಾರದು ಎಂದು ಕರೆ ಕೊಟ್ಟರು.