Freedom TV

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್​ ಅಹ್ಮದ್​ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದನು.ಈ ಮಾಹಿತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ಎನ್​ಐಎಗೆ ನೀಡಿದ್ದಾರೆ.ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್​ ಅಹ್ಮದ್​​ನನ್ನು ಬಂಧಿಸಿದ್ದಾರೆ. ಹಾಗೂ ಇತ್ತೀಚಿಗೆ ಎನ್​ಐಎ ಅಧಿಕಾರಿಗಳು ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದರು. ಆರೋಪಿಗಳು ಹನಿಟ್ರ್ಯಾಪ್​​ಗೆ ಒಳಗಾಗಿ,ಹಣಕ್ಕಾಗಿ ಸೀಬರ್ಡ್ ನೌಕಾನೆಲೆ ಫೋಟೋ,ಇತರೆ ಮಾಹಿತಿಯನ್ನು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ಎನ್​ಐಎ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

Comments (0)

Your email address will not be published. Required fields are marked *

Back to top button