Friday, September 12, 2025
20.8 C
Bengaluru
Google search engine
LIVE
ಮನೆ#Exclusive Newsಜಮ್ಮುವಿನ ಅಖ್ನೂರ್​ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಉಗ್ರರ ದಾಳಿ; ಗುಲ್ಮಾರ್ಗ್​ನಲ್ಲಿ ಗುಂಡಿನ ಚಕಮಕಿ

ಜಮ್ಮುವಿನ ಅಖ್ನೂರ್​ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಉಗ್ರರ ದಾಳಿ; ಗುಲ್ಮಾರ್ಗ್​ನಲ್ಲಿ ಗುಂಡಿನ ಚಕಮಕಿ

Jammu Kashmir terror attack: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕರ ಆಟಾಟೋಪ ಮುಂದುವರಿದಿದೆ. ಜಮ್ಮು ಜಿಲ್ಲೆಯ ಅಖ್ನೂರ್ ಸೆಕ್ಟರ್​ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಉಗ್ರರ ಗುಂಪೊಂದು 15ರಿಂದ 20 ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬಟ್ಟಲ್ ಎಂಬಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ಗುಂಪೊಂದರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ.

ಶ್ರೀನಗರ್, ಅಕ್ಟೋಬರ್ 28: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್​ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಾರೆ. ಈ ಘಟನೆಯಲ್ಲಿ ಯೋಧರಿಗೆ ಸಾವು ನೋವು ಸಂಭವಿಸಿದೆಯಾ ಎನ್ನುವ ಮಾಹಿತಿ ಸದ್ಯಕ್ಕೆ ತಿಳಿದುಬಂದಿಲ್ಲ. ಮಾಧ್ಯಮಗಳಿಗೆ ಸಿಕ್ಕಿರುವ ಪ್ರಾಥಮಿಕ ವರದಿ ಪ್ರಕಾರ ಅಖ್ನೂರ್ ನಗರದ ಜೋಗವಾನ್ ಎಂಬಲ್ಲಿ ಉಗ್ರಗಾಮಿಗಳು ಸೈನಿಕರ ವಾಹನಗಳ ಮೇಲೆ ಹಲವು ಸುತ್ತು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಭದ್ರತಾ ಪಡೆಗಳು ಉಗ್ರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಕೈಗೊಂಡಿವೆ ಎನ್ನುವ ಮಾಹಿತಿ ಸಿಕ್ಕಿದೆ.

ಮತ್ತೊಂದು ವರದಿ ಪ್ರಕಾರ ಅಖ್ನೂರ್ ಸೆಕ್ಟರ್​ನ ಬಟ್ಟಲ್ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ಮಧ್ಯೆ ಗುಂಡಿನ ಗಾಳಗ ನಡೆದಿದೆ. ಭದ್ರತಾ ಪಡೆಗಳ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು ಇದೇ ಉಗ್ರರ ಗುಂಪಿರಬಹುದು ಎಂದು ಶಂಕಿಸಲಾಗಿದೆ

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments