ಇಂಗ್ಲೆಂಡ್ ವಿರುದ್ಧದ ಅಂತಿಮ ಮೂರು ಪಂದ್ಯಗಳಿಗೆ ಭಾರತ ತಂಡ ಇನ್ನೂ ಪ್ರಕಟಗೊಂಡಿಲ್ಲ. ಇಂದು ಅಥವಾ ನಾಳೆ ತಂಡ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಆದರೆ, ವಿರಾಟ್ ಕೊಹ್ಲಿ 3ನೇ ಮತ್ತು ನಾಲ್ಕನೇ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.
ಭಾರತ ತನ್ನ ಕೊನೆಯ ಪಂದ್ಯವನ್ನು ಧರ್ಮಶಾಲಾದಲ್ಲಿ ಮಾರ್ಚ್ 7ರಿಂದ 11ರ ತನಕ ಆಡಲಿದೆ. ಈ ಪಂದ್ಯಕ್ಕೆ ಇನ್ನೂ ಒಂದು ತಿಂಗಳುಗಳ ಕಾಲಾವಕಾಶವಿದೆ. ಆದರೂ ಕೂಡ ಈ ಪಂದ್ಯಕ್ಕೆ ಕೊಹ್ಲಿ ಲಭ್ಯತೆ ಬಗ್ಗೆ ಈಗಲೇ ಏನೂ ಹೇಳುವಂತಿಲ್ಲ ಎಂದು ಬಿಸಿಸಿಐ ಮಂಡಳಿ ಮೂಲಗಳು ತಿಳಿಸಿದೆ. ಈ ಹೇಳಿಕೆ ಗಮನಿಸುವಾಗ ಕೊಹ್ಲಿ ಇಡೀ ಸರಣಿಯನ್ನೇ ತಪ್ಪಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬುದನ್ನು ಬಿಟ್ಟು ಬೇರೆ ಯಾವ ಕಾರಣಕ್ಕೆ ಕೊಹ್ಲಿ ಸರಣಿಗೆ ಗೈರಾಗಿದ್ದಾರೆ ಎಂಬುದು ಈವರೆಗೆ ಅಧಿಕೃತವಾಗಿ ತಿಳಿದು ಬಂದಿಲ್ಲ. ಕೆಲ ದಿನಗಳ ಹಿಂದೆ ಪಾಕಿಸ್ತಾನದ ಕೆಲ ಮಾಧ್ಯಮಗಳು ವಿರಾಟ್ ಕೊಹ್ಲಿ ತಾಯಿ ಅಸೌಖ್ಯದಿಂದ ಬಳಲುತ್ತಿದ್ದಾರೆ ಎಂದು ವರದಿ ಮಾಡಿತ್ತು. ಆದರೆ ಕೊಹ್ಲಿಯ ಸಹೋದರ ಈ ವದಂತಿಯನ್ನು ತಳ್ಳಿ ಹಾಕಿದ್ದರು. ತಾಯಿ ಆರೋಗ್ಯವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದರು.
ವಿರಾಟ್ ಕ್ರಿಕೆಟ್ ಕಂಡ ಶ್ರೇಷ್ಠ ಆಟಗಾರರಲ್ಲಿ ಒಬ್ಬರು. ಅವರ ಆಗಮನ ಆ ತಂಡದ ಬಲವನ್ನು ಸುಧಾರಿಸುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಭಾರತೀಯ ಕ್ರಿಕೆಟ್ನಲ್ಲಿ ಆಳದಲ್ಲಿ ಹಲವಾರು ಪ್ರತಿಭೆಗಳಿವೆ. ಆದ್ದರಿಂದ ನಾವು ಎದುರಾಳಿ ತಂಡದ ಪ್ರತಿಯೊಬ್ಬ ಆಟಗಾರನನ್ನು ಗೌರವಿಸುತ್ತೇವೆ ಎಂದು ಮೆಕಲಮ್ ಹೇಳಿದ್ದರು