ಪ್ರತಿ ಸಿನಿಮಾದಲ್ಲಿಯೂ ತಮ್ಮ ಕ್ರಿಯೆಟಿವಿಟಿ ಮೂಲಕ ಪ್ರೇಕ್ಷಕರ ಮುಂದೆ ಹೊಸ ಕಥೆ ತರುವ ನಿರ್ದೇಶಕ ತರುಣ್ ಸುಧೀರ್ (Tharun Sudhir) ಈಗ ತಮ್ಮ ಜೀವನದ ರಿಯಲ್ ನಾಯಕಿಯನ್ನ ಆಯ್ಕೆ ಮಾಡಿಕೊಂಡಿದ್ದಾರೆ. ಈ ವಿಚಾರವನ್ನ ತಮ್ಮದೇ ಸ್ಟೈಲಿನಲ್ಲಿ ಕ್ರಿಯೆಟಿವ್ ಆಗಿ ಅಭಿಮಾನಿಗಳು ಮತ್ತು ಸ್ನೇಹಿತರ ಮುಂದೆ ಪ್ರಸೆಂಟ್ ಮಾಡಿದ್ದಾರೆ. ಡೈರೆಕ್ಟರ್ ತರುಣ್ ಸುಧೀರ್ ಮತ್ತು ಸೋನಲ್ (Actress Sonal) ಇಬ್ಬರು ದಾಂಪತ್ಯ (Wedding) ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ವಿಚಾರವನ್ನ ಬ್ಯೂಟಿಫುಲ್ ಆಗಿರೋ ವಿಡಿಯೋ ಮೂಲಕ ತಿಳಿಸಿದ್ದಾರೆ. ತರುಣ್ ಮತ್ತು ಸೋನಲ್ ಇಬ್ಬರು ಸಿನಿಮಾ ಇಂಡಸ್ಟ್ರಿಯವರೇ ಆಗಿರೋದ್ರಿಂದ ತಮ್ಮ ಪ್ರಿ ವೆಡ್ಡಿಂಗ್ ವಿಡಿಯೋವನ್ನ ಥಿಯೇಟರ್‌ನಲ್ಲಿಯೇ ಶೂಟ್ ಮಾಡಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com
Phone Number : +91-9164072277
Email id : salesatfreedomtv@gmail.com