ಮಂಡ್ಯ : ಸಕ್ಕರೆನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಮೂರನೇ ದಿನ ಇಂದು (ಡಿಸೆಂಬರ್ 22) ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬೀಳಲಿದೆ. 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಭೆಯಲ್ಲಿ ನಿರ್ಧರಿಸಲಾಗಿದೆ.
ಬಳ್ಳಾರಿಗೆ 66 ವರ್ಷದ ಬಳಿಕ ಮರಳಿ ಸಾಹಿತ್ಯ ಸಮ್ಮೇಳನದ ಅತಿಥ್ಯ ದೊರೆಯುತ್ತಿದೆ. ಈ ಹಿಂದೆ 1926, 1938 ಮತ್ತು 1958ರಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು.
ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರವಿವಾರ ತೆರೆ ಬೀಳಲಿದೆ. ಸಂಜೆ 4ಕ್ಕೆ ನಡೆಯಲಿರುವ ಸಮಾರೋಪ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀಗಳ ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ.ಗೊ.ರು.ಚನ್ನಬಸಪ್ಪ, ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ ಉಪಸ್ಥಿತರಲಿದ್ದಾರೆ.