ಚಿತ್ರದುರ್ಗ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ, ಮತ್ತು 4 ಲಕ್ಷ ರೂಪಾಯಿ ಪರಿಹಾರ ಹಾಗೂ 50 ಸಾವಿರ ದಂಡ ಕಟ್ಟುವಂತೆ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಪೋಕ್ಸೋ) ನ್ಯಾಯಾಧೀಶರಾದ ಬಿಕೆ ಕೋಮಲ ಅವರು ತೀರ್ಪು ನೀಡಿ ಆದೇಶಿಸಿದ್ದಾರೆ.
ಚಳ್ಳಕೆರೆ ತಾಲೂಕಿನ ಕಾರ್ತಕೇನಹಟ್ಟಿಯ ಮನು ಎಂಬ ಆರೋಪಿ ಅಪ್ರಾಪ್ತ ಬಾಲಕಿಯನ್ನು ಹೆಚ್ ಎಂ ಎಸ್ ಲೇಔಟ್ ಗೆ ಕರೆದುಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಮಾಡಿದ್ದು, ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಆರ್ ಎಫ್ ದೇಸಾಯಿ ತನಿಖೆ ನಡೆಸಿ ಧೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಪ್ರಕರಣದ ವಿಚಾರಣೆಯನ್ನು ನಡೆಸಿದ ಎರಡನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿಕೆ ಕೋಮಲ ಅವರು ಮೇಲಿನಂತೆ 10 ವರ್ಷ ಕಠಿಣ ಸಜೆ 50 ಸಾವಿರ ದಂಡ ವಿಧಿಸಿದೆ. ಹಾಗೂ 4 ಲಕ್ಷ ರೂಪಾಯಿ ಪರಿಹಾರವನ್ನು ಬಾಲಕಿಗೆ ನೀಡುವಂತೆ ಆದೇಶಿಸಿದ್ದಾರೆ.