ದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಮಂದಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
A1 ಪವಿತ್ರಾ ಗೌಡ, A2 ದರ್ಶನ್ ಸೇರಿ ಎಲ್ಲರ ಜಾಮೀನು ರದ್ದುಗೊಳಿಸಿದೆ. ಈ ಮೂಲಕ ದರ್ಶನ್, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳು ಮತ್ತೆ ಜೈಲು ಪಾಲಾಗಲಿದ್ದಾರೆ.
ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಆದೇಶವನ್ನು ಕಾಯ್ದಿರಿಸಿತ್ತು. ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.
ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಸುಪ್ರಿಂಕೋರ್ಟ್ ಅಭಿಪ್ರಾಯ ಪಟ್ಟಿದೆ. ಆರೋಪಿಗಳು ಎಷ್ಟೇ ದೊಡ್ಡವರಾದರು ಕಾನೂನಿನ ಮುಂದೆ ಯಾರೂ ಕೂಡಾ ದೊಡ್ಡವರಲ್ಲ ಯಾರು ಕೂಡಾ ಚಿಕ್ಕವರಲ್ಲ. ಆರೋಪಿಗಳಿಗೆ ಜೈಲಿನಲ್ಲಿ ಫವ್ ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ದರ್ಶನ್ ರಾಜಾತಿಥ್ಯ ಕೊಟ್ಟ ಜೈಲಾಧಿಕಾರಿ ಅಮಾನತಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಅಷ್ಟೇ ಅಲ್ಲದೇ ಈ ಕೂಡಲೇ ನಟ ದರ್ಶನ್ ಸೇರಿ 7 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡುವಂತೆ ಆದೇಶ ಮಾಡಿದೆ.