ಕ್ರೈಂ ಸ್ಟೋರಿಜಿಲ್ಲೆ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ..ಕೊಲೆಗೆ ನಡೆದಿತ್ತಾ ಮೊದಲೇ ಸಂಚು..?

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೊರವಲಯದ ಕಿನ್ನಿಪದವು ಬಳಿ ನಿರ್ದಯವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

2 ವರ್ಷಗಳ ಹಿಂದೆ ಸುರತ್ಕಲ್​ನಲ್ಲಿ ನಡೆದಿದ್ದ ಫಾಜಿಲ್ ಎಂಬಾತನ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ.

ನಿನ್ನೆ ರಾತ್ರಿ ಸ್ನೇಹಿತರ ಜೊತೆ ಇನ್ನೋವಾ ಕಾರಿನಲ್ಲಿ ಸುಹಾಸ್ ಶೆಟ್ಟಿ ಬರ್ತಿದ್ದ ವೇಳೆ ಇದನ್ನ ಗಮನಿಸಿದ್ದ ಹಂತಕರು ಮೀನಿನ ಟೆಂಪೋ, ಸ್ವಿಫ್ಟ್ ಕಾರಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಸುಹಾಸ್ ಇದ್ದ ಇನ್ನೋವಾ ಕಾರಿಗೆ ಮೀನಿನ ಟೆಂಪೋದಿಂದ ಡಿಕ್ಕಿ ಹೊಡೆದು, ಸ್ವಿಫ್ಟ್ ಕಾರಿನಿಂದ ಇಳಿದ ದುಷ್ಕರ್ಮಿಗಳು ಸುಹಾಸ್ ಶೆಟ್ಟಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ.

6 ಜನ ಗ್ಯಾಂಗ್​ನಿಂದ ಸುಹಾಸ್ ಶೆಟ್ಟಿ ಕೊಲೆ ಮಾಡಲಾಗಿದೆ ಎನ್ನಲಾಗ್ತಿದೆ.ಮನಸೋ ಇಚ್ಛೆ ಹಲ್ಲೆ ಮಾಡಿದ ದುರುಳರು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನೂ ವಿಚಾರ ತಿಳಿದು ಸ್ಪಾಟ್​​ಗೆ ಬಂದ ಬಜಪೆ ಪೊಲೀಸ್ ಠಾಣೆ ಪೊಲೀಸರು, ಕೇಸ್​ ದಾಖಲಿಸಿಕೊಂಡು ನಾಲ್ಕು ತಂಡ ರಚಿಸಿ ತನಿಖೆ ಶುರು ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button