Thursday, January 29, 2026
16.9 C
Bengaluru
Google search engine
LIVE
ಮನೆ#Exclusive Newsಕೇಂದ್ರ ಸರ್ಕಾರ ಮಹದಾಯಿ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡುತ್ತಿದೆ!

ಕೇಂದ್ರ ಸರ್ಕಾರ ಮಹದಾಯಿ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡುತ್ತಿದೆ!

ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು  ಪ್ರತಿಭಟನೆ ಮಾಡುತ್ತಿದ್ದಾರೆ. ನರಗುಂದದಿಂದ ಗದಗ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿದ್ದಾರೆ.ಮಹದಾಯಿ ಯೋಜನೆ ಅನುಷ್ಠಾನಕ್ಕೆ ಶೀಘ್ರ ಕ್ರಮ ಕೈಗೊಳ್ಳಲು ಗದಗ ಜಿಲ್ಲಾಧಿಕಾರಿಗಳ ಮೂಲಕ‌ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರ ಮಹದಾಯಿ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡುವುದನ್ನು ಬಿಟ್ಟು, ರಾಜ್ಯದ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಬೇಕಾಗಿರೋ ಕ್ಲೇಯರೆನ್ಸ್ ನೀಡಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ನಮ್ಮ ಹೋರಾಟವನ್ನು ಮತ್ತಷ್ಟು ಚುರುಕುಗೊಳಿಸುವ ಮೂಲಕ ಈ ಎರಡು ಸರ್ಕಾರಗಳಿಗೆ ಬಿಸಿ ಮುಟ್ಟಿಸುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದರು. ಇನ್ನೂ ಮಹದಾಯಿ ಯೋಜನೆ ಅನುಷ್ಠಾನದ ಕರವೇ ಪ್ರವೀಣ್ ಶೆಟ್ಟಿ ಬಣದ ಹೋರಾಟಕ್ಕೆ ಐವತ್ತು ಹೆಚ್ಚು ಅಟೋಗಳು ಸಾಥ್ ನೀಡಿ, ನರಗುಂದದ ಕಡೆ ತೆರಳಿದವು.‌

 

 

 

 

 

 

 

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments