Wednesday, November 19, 2025
21.1 C
Bengaluru
Google search engine
LIVE
ಮನೆ#Exclusive NewsTop Newsರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕೇಂದ್ರವೇ ಹೊಣೆ; ಸಿಎಂ ಸಿದ್ದರಾಮುಯ್ಯ

ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕೇಂದ್ರವೇ ಹೊಣೆ; ಸಿಎಂ ಸಿದ್ದರಾಮುಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಮಾತ್ರವಲ್ಲ ಬಿಜೆಪಿ ಪಕ್ಷ ಆಡಳಿತದಲ್ಲಿರುವ ಹರಿಯಾಣ, ಮಧ್ಯಪ್ರದೇಶ ರಾಜ್ಯಗಳಲ್ಲೂ ರಸಗೊಬ್ಬರ ಕೊರತೆ ಉಂಟಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ರಸಗೊಬ್ಬರ ಕೊರತೆ ವಿಚಾರವಾಗಿ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆ ಮಾಡಿಲ್ಲ. ಈ ಬಗ್ಗೆ ಪತ್ರ ಬರೆದು ಮನವಿಯನ್ನು ಸಹ ಮಾಡಲಾಗಿದೆ. ಕೇಂದ್ರದಿಂದ 6.82 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬರಬೇಕಿತ್ತು, ಆದರೆ ನಮಗೆ ಪೂರೈಕೆಯಾಗಿರುವುದು 5.27 ಲಕ್ಷ ಮೆಟ್ರಿಕ್ ಟನ್. ರಸಗೊಬ್ಬರ ಉತ್ಪಾದನೆ ಮಾಡುವವರು ನಾವಲ್ಲ, ರಸಗೊಬ್ಬರ ಸರಬರಾಜು ಮಾಡುವವರು ನಾವಲ್ಲ. ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ರಸಗೊಬ್ಬರ ಕೇಳಿದ ರೈತರನ್ನು ಗುಂಡಿಕ್ಕಿ ಕೊಂದಿದ್ದರು. ನಾವು ಅವರಂತಲ್ಲ. ಬಿಜೆಪಿ ನಾಯಕರು ರಾಜಕೀಯ ಟೀಕೆ ಮಾಡಿ ಕಾಲಹರಣ ಮಾಡುವ ಬದಲು ಕೇಂದ್ರ ಸರ್ಕಾರದ ಬಳಿ ಮಾತನಾಡಿ, ತಕ್ಷಣ ರಸಗೊಬ್ಬರ ಪೂರೈಕೆ ಮಾಡಿಸಲಿ ಎಂದು ಆಗ್ರಹಿಸಿದ್ರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments