Monday, December 8, 2025
24.9 C
Bengaluru
Google search engine
LIVE
ಮನೆದೇಶ/ವಿದೇಶಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಉತ್ತರ ಕೊಡಬೇಕು- ಡಿಕೆ ಶಿವಕುಮಾರ್​

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಉತ್ತರ ಕೊಡಬೇಕು- ಡಿಕೆ ಶಿವಕುಮಾರ್​

ಬೆಂಗಳೂರು: ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕಾಗಿರುವುದು. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ಕೇಂದ್ರ ಸರ್ಕಾರ ಈವರೆಗೂ ಬಾಯಿ ಬಿಟ್ಟಿಲ್ಲ. ಬಿಜೆಪಿಯ ಸಂಸದರು ರಾಜ್ಯದ ಯಾವುದೇ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿಲ್ಲ. ಬೊಮ್ಮಾಯಿ ಅವರು ರಾಜ್ಯ ಸರ್ಕಾರ ಖರೀದಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ ಕೇಂದ್ರ ಸರ್ಕಾರದ ಪಾಲೇನು ಇದರ ತೀರ್ಮಾನ ಮಾಡುವವರು ಯಾರು.

ಪ್ರತಿಯೊಂದಕ್ಕೂ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಈವರೆಗೆ ಈ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಪರಿಹಾರ ನೀಡಲೆಂದೇ ನಾವಿದ್ದೇವೆ. ಇದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಇದೆಯಲ್ಲವೇ ಇಲ್ಲಿಯವರೆಗೂ ಬೊಮ್ಮಾಯಿ ಅವರು ಯಾಕೆ ಸಂಸತ್ತಿನಲ್ಲಿ ಈ ವಿಚಾರವಾಗಿ ಧ್ವನಿ ಎತ್ತಿಲ್ಲ. ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿಲ್ಲ ಎಂದು ಪ್ರಶ್ನಿಸಿದರು.

ಇನ್ನು ನೀರಾವರಿ ಸಮಸ್ಯೆ ಹಾಗೂ ಯೋಜನೆ ಅನುಷ್ಠಾನವಾಗದಿರುವ ಬಗ್ಗೆ ಮಾತನಾಡಿ, ನನ್ನ ಅವಧಿಯಲ್ಲಿ ನೀರಾವರಿ ಯೋಜನೆಗಳಿಗೆ ಮಾಡಿದಷ್ಟು ಯೋಜನೆ ಇಲಾಖೆಯ ಇತಿಹಾಸದಲ್ಲಿ ಯಾರೂ ಮಾಡಿಲ್ಲ. ಈ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ, ವಿರೋಧ ಪಕ್ಷಗಳು ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಲಿ, ಅಲ್ಲಿ ಉತ್ತರಿಸುತ್ತೇನೆ ಎಂದು ತಿಳಿಸಿದರು.

ಕಾಂಗ್ರೆಸ್‌ನಲ್ಲಿ ಸಚಿವರಾಗಬೇಕಾದರೆ 500 ಕೋಟಿ ರೂ. ನೀಡಬೇಕು ಎಂಬ ನವಜೋತ್ ಸಿಂಗ್ ಸಿಧು ಅವರ ಪತ್ನಿ ಹೇಳಿಕೆ ವಿಚಾರವಾಗಿ ಕೇಳಿದಾಗ, ಈ ರೀತಿ ಹೇಳಿದವರನ್ನು ಆಸ್ಪತ್ರೆಗೆ ಸೇರಿಸೋಣ. ಒಳ್ಳೆಯ ಮೆಂಟಲ್ ಆಸ್ಪತ್ರೆಗೆ ಸೇರಿಸೋಣ ಎಂದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments