#Exclusive NewsTop Newsರಾಜಕೀಯರಾಜ್ಯಸುದ್ದಿ

ಮುಖ್ಯಮಂತ್ರಿಗಳಿಗೆ ಧೈರ್ಯ ಇಲ್ಲ ; ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾಖಲೆ ಇಲ್ಲದ ಕಾರಣ ಸಚಿವ ಸ್ಥಾನದಿಂದ ಕೈಬಿಡುವ ವಿಚಾರ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಮುಖ್ಯಮಂತ್ರಿಗಳೇ ಇದು ನಮಗೆ ಮೊದಲೇ ಗೊತ್ತಿದೆ. ನಿಮಗೆ ಧೈರ್ಯ ಇಲ್ಲ ಎಂಬುದು ನಮಗೆ ಗೊತ್ತಿದೆ ಎಂದು  ಛಲವಾದಿ ನಾರಾಯಣಸ್ವಾಮಿ  ಟೀಕಿಸಿದರು.

ಸಚಿನ್ ಬರೆದಿಟ್ಟ 7 ಪುಟಗಳ ಡೆತ್ ನೋಟಿನಲ್ಲಿ 2-3 ಬಾರಿ ಪ್ರಿಯಾಂಕ್ ಖರ್ಗೆಯವರ  ಹೆಸರು ಪ್ರಸ್ತಾಪವಾಗಿದೆ. ಜೊತೆಗೆ ಎಫ್‌ಎಸ್‌ಎಲ್ ವರದಿಯಲ್ಲೂ ಡೆತ್ ನೋಟ್ ಅಸಲಿ ಎಂದು ದೃಢಪಟ್ಟಿದೆ. ದಾಖಲೆ ಕೊಡಿ ಎಂದರೆ ಇನ್ನೇನು ದಾಖಲೆ ಬೇಕು ನಿಮಗೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಆ ಸಚಿವರ ತಂದೆಯವರು ಎಐಸಿಸಿ ಅಧ್ಯಕ್ಷರು. ನೀವು ಇದಕ್ಕೆ ಕೈ ಹಾಕಿದರೆ ಅವರು ನಿಮ್ಮ ಬುಡಕ್ಕೆ ಕೈ ಹಾಕುವ ಭಯ ನಿಮಗಿದೆ. ನೀವು ಕುರ್ಚಿಗೆ ಅಂಟಿ ಕುಳಿತವರು. ಇಷ್ಟೊತ್ತಿಗೆ ನೀವು ಅವರನ್ನು ವಜಾ ಮಾಡಬೇಕಿತ್ತು, ರಾಜೀನಾಮೆ ಪಡೆಯಬೇಕಾಗಿತ್ತು. ಬೇರೆ ಸರ್ಕಾರವಿದ್ದಾಗ ಸ್ವಲ್ಪ ಬಂದರೂ ಬೀದಿಗಿಳಿದು ಬೆಂಕಿ ಹಚ್ಚುತ್ತೀರಲ್ಲವೇ? ಈಗ ನಿಮ್ಮನ್ನು ತಡೆದೋರ‍್ಯಾರು ಎಂದು ಕಿಡಿಕಾರಿದರು.

 

Comments (0)

Your email address will not be published. Required fields are marked *

Back to top button