ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತ ಕಳ್ಳತನ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚಿಗೆ ಸಂಸತ್ ಆವರಣದಲ್ಲಿ ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಗಸ್ಟ್ ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿತ್ತು. ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ ಎಂಬ ಧ್ಯೇಯ ವಾಕ್ಯದಡಿ ಹಮ್ಮಿಕೊಂಡ ಪ್ರತಿಭಟನಾ ಸಮಾವೇಶವನ್ನು ಇದೀಗ ಮುಂದೂಡಿದೆ.
ಆಗಸ್ಟ್ 5 ರಂದು ನಡೆಯಬೇಕಿದ್ದ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಿಕೆ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ತಿಳಿಸಿದ್ದಾರೆ. ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನ ಹೊಂದಿದ್ದು, ಅಂತಿಮ ನಮನ ಸಲ್ಲಿಸಲು ಹಿರಿಯ ನಾಯಕರು ತೆರಳುತ್ತಿದ್ದಾರೆ. ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೋಗಲಿದ್ದಾರೆ. ಹೀಗಾಗಿ ನಾಳೆ ನಿಗದಿಯಾಗಿದ್ದ ಪ್ರತಿಭಟನಾ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.


