Wednesday, April 30, 2025
24 C
Bengaluru
LIVE
ಮನೆ#Exclusive Newsಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು

ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು

ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್​​ ಸವದತ್ತಿ (18) ಮೃತಪಟ್ಟ ಮಾಲಾಧಾರಿಗಳು. ಇವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇನ್ನುಳಿದ 7 ಮಂದಿ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕಿಮ್ಸ್ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಈ ನಡುವೆ, ಹೆಚ್ಚಿನ ಚಿಕಿತ್ಸೆ ಕೂಡಿಸಲು ಸಚಿವ ಸಂತೋಷ್ ಲಾಡ್ ಸಾಕಷ್ಟು ಮುತುವರ್ಜಿ ವಹಿಸಿದ್ದಾರೆ.

ಹುಬ್ಬಳ್ಳಿ ದುರಂತದ ಹಿನ್ನೆಲೆ

ಡಿಸೆಂಬರ್ 22ರ ರಾತ್ರಿ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಅಯ್ಯಪ್ಪ ಮಾಲಾಧಾರಿಗಳು ದೇಗುಲದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್​ ಸ್ಫೋಟಗೊಂಡಿತ್ತು. ಗ್ಯಾಸ್​ ಸೋರಿಕೆಯಾಗಿದ್ದು, ದೀಪದ ಬೆಂಕಿ ತಗುಲಿ ಸ್ಫೋಟಗೊಂಡಿತ್ತು. ಈ ವೇಳೆ 9 ಮಂದಿ ಗಂಭೀರ ಗಾಯಗೊಂಡಿದ್ದರು. ಅವರನ್ನೆಲ್ಲ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರಿನಿಂದ ತಜ್ಞ ವೈದ್ಯರ ಆಗಮನ: ಮುಂದುವರಿದ ಚಿಕಿತ್ಸೆ

ಸಚಿವ ಸಂತೋಷ್ ಲಾಡ್ ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಸಿಕೊಂಡು ಚಿಕಿತ್ಸೆ ಕೊಡಿಸುವ ಕೆಲಸ ಮಾಡಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಆಗಮಿಸಿದ ಇಬ್ಬರು ನುರಿತ ಪ್ಲಾಸ್ಟಿಕ್ ಸರ್ಜರಿ ವೈದ್ಯರು, ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಪರಿಶೀಲನೆ ಮಾಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ನುರಿತ ಪ್ಲಾಸ್ಟಿಕ್ ಸರ್ಜನ್ ಡಾ. ಕೆಟಿ ರಮೇಶ್ ಮತ್ತು ಡಾ. ಎಂ ಶಂಕ್ರಪ್ಪ ಭೇಟಿ ನೀಡಿ ಗಾಯಾಳುಗಳ ಪ್ರಸ್ತುತ ಆರೋಗ್ಯ ಸ್ಥಿತಿ ಮತ್ತು ಕಿಮ್ಸ್ ವೈದ್ಯರು ಕೊಡುತ್ತಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ರೋಗಿಗಳ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡ ವೈದ್ಯರು, ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಸದ್ಯದ ಚಿಕಿತ್ಸೆಯ ಮಾಹಿತಿ ಪಡೆದುಕೊಳ್ಳುವುದರ ಜೊತೆಗೆ, ಮುಂದಿನ ಹಂತದ ಕುರಿತು ಸಲಹೆಗಳನ್ನು ನೀಡಿ, ಗಾಯಾಳುಗಳು ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments