ಬೆಂಗಳೂರು : ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಕರೆದಿದ್ದ ಡಿನ್ನರ್ ಮೀಟಿಂಗ್ ದಿಢೀರ್ ರದ್ದಾಗಿದೆ. ದಲಿತ ಸಚಿವರು ಹಾಗೂ ಶಾಸಕರ ಜತೆ ಡಿನ್ನರ್ ಮೀಟಿಂಗ್ ಸಭೆ ಕರೆದಿದ್ರು. ಆದ್ರೆ ಹೈಕಮಾಂಡ್ ಡಿನ್ನರ್ ಮೀಟಿಂಗ್ ಸಭೆ ಬ್ರೇಕ್ ಹಾಕಿದ್ದಾರೆ.
ನಾಳೆ ನಡೆಯಬೇಕಿದ್ದ ಸಭೆ ದಿಢೀರ್ ರದ್ದಾಗಿರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್ ಮಾಡಿದ್ರು. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ಹೊರಹಾಕಿದ್ರು. ಈ ಸಂಬಂಧ ಹೈಕಮಾಂಡ್ ಗೆ ಡಿಸಿಎಂ ಡಿಕೆ ಶಿವಕುಮಾರ್ ದೂರು ನೀಡಿದ್ರು. ಈ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಪರಮೇಶ್ವರ್ ಕರೆದಿದ್ದ ಔತಣಕೂಟ ಮಾಡದಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ನಾಳೆ ನಡೆಯಬೇಕಿದ್ದ ಪರಮೇಶ್ವರ್ ಅವರ ಡಿನ್ನರ್ ಮೀಟಿಂಗ್ ರದ್ದಾಗಿದೆ.