ಮಂಡ್ಯ: ಕೆಆರ್ಎಸ್ ಅಣೆಕಟ್ಟು ಕಟ್ಟುವುದಕ್ಕೆ ಮೊದಲು ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್. ಆದ್ರೆ ಈಗ ಅದನ್ನು ಹೇಳಲು ಯಾರಿಗೂ ಧೈರ್ಯ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ ನೀಡಿದ್ದಾರೆ.
ಮಂಡ್ಯದ ಶ್ರೀರಂಗಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕನ್ನಂಬಾಡಿ ಕಟ್ಟೆ ಕಟ್ಟೊದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ರು. ಕೆ.ಆರ್.ಎಸ್.ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು. ಚರಿತ್ರೆ ಗೊತ್ತಿಲ್ಲದವರು ಚರಿತ್ರೆ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಒಂದು ಕಡೆ ಟಿಪ್ಪು ಮಸೀದಿ ಇದೆ. ಪಕ್ಕದಲ್ಲೇ ದೇವಸ್ಥಾನ ಇದೆ ಎಂದು ಹೇಳಿದ್ದಾರೆ.
ಈ ಕಡೆ ಅಲ್ಲಾ ಹೋ ಅಕ್ಬರ್ ಅಂತಾರೆ. ಆ ಕಡೆ ಗಂಟೇ ಬಾರಿಸ್ತಾರೆ.. ಎರಡನ್ನು ಕೇಳ್ತಿದ್ರು ಟಿಪ್ಪು. ಆ ಕಾಲದಲ್ಲೇ ದೇವದಾಸಿ ಪದ್ಧತಿ ರದ್ದು ಮಾಡಿದ್ರು. ಟಿಪ್ಪು ಕಾಲದಲ್ಲಿ ಒಂದಿಂಚು ಭೂಮಿಯನ್ನು ಉಳ್ಳವರಿಗೆ ಕೊಟ್ಟಿರಲಿಲ್ಲ.
ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದೊಡ್ಡ ಸ್ವತಂತ್ರ ಸೇನಾನಿ. ಇದನ್ನು ಅರ್ಥ ಮಾಡಿಕೊಳ್ಳದೆ ಅವರ ಚಳವಳಿಗಳನ್ನ ಟೀಕಿಸುತ್ತಾರೆ ಎಂದು ಹೇಳಿದ್ದಾರೆ.


