ಬೆಂಗಳೂರು: ಹಲವು ಬೇಡಿಕೆಗಳಿಗೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಸರ್ಕಾರದ ಪರಿಸ್ಥಿತಿಯನ್ನು ಸಾರಿಗೆ ನೌಕರರು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಸಾರಿಗೆ ನೌಕರರು ಕೇಳಿರುವ ಬೇಡಿಕೆ ತಪ್ಪಿಲ್ಲ. ಆದ್ರೆ ಸಾರಿಗೆ ನೌಕರರು ಹಠ ಮಾಡುವುದು ಸರಿಯಲ್ಲ. ಸಾರಿಗೆ ನೌಕರರ ಜೊತೆ ಸಿಎಂ ಹಾಗೂ ಸಚಿವರು ಸಭೆ ನಡೆಸಿದ್ದು, ಕೆಲವು ಭರವಸೆಗಳನ್ನು ನೀಡಿದ್ದಾರೆ. ಸಾರಿಗೆ ನೌಕರರು ಸಹ ಸರ್ಕಾರದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.
ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸುವುದ ತಪ್ಪು. ಸಾರ್ವಜನಿಕರ ಹಿತ ಮುಖ್ಯ ಸಾರಿಗೆ ನೌಕರರು ಇದನ್ನು ಅರ್ಥ ಮಾಡಿಕೊಳ್ಳಿ ಹಾಗೂ ಕೆಲಸಕ್ಕೆ ಬನ್ನಿ ಎಂದು ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಇಂದು ಯಾರೆಲ್ಲಾ ಸಾರಿಗೆ ನೌಕರರು ಕೆಲಸಕ್ಕೆ ಬಂದಿದ್ದಾರೆ ಅವರಿಗೆಲ್ಲ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 10 ರಂದು ಯೆಲ್ಲೋ ಮೆಟ್ರೋ ಉದ್ಘಾಟನೆಗೆ ಬರುತ್ತೇನೆ ಎಂದು ಹೇಳಿದ್ದಾರೆ. ನಾವೂ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಾಗುತ್ತದೆ. ಅವರು ಇದೊಂದೆ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಬದಲಾಗಿ ಬೇರೆ ಬೇರೆ ಕಾರ್ಯಕ್ರಮದ ಸಲುವಾಗಿ ಬರುತ್ತಿದ್ದಾರೆ. ಅವರು ಇನ್ನು ಕಾರ್ಯಕ್ರಮದ ಸಮುಯವನ್ನು ತಿಳಿಸಿಲ್ಲ ಎಂದು ಹೇಳಿದ್ದಾರೆ.